ಅಕ್ರಮ ಗುರುತು ಚೀಟಿ ಪ್ರಕರಣವನ್ನ ಸಮಗ್ರ ತನಿಖೆಗೆ ಬಿಜೆಪಿ ಮನವಿ ಮಾಡಿದೆ. ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಇಂದು ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ.

ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್‍ಐಎ ಅಥವಾ ಸಿಬಿಐಗೆ ಇದನ್ನು ಒಪ್ಪಿಸಲು ಶಿಫಾರಸು ಮಾಡುವಂತೆ ಮನವಿ ಮಾಡಲಾಯಿತು. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ಪ್ರಕಾರ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್‍ಸ್ಪೆಕ್ಟರ್ ಅವರು ಇದೇ 19ರಂದು ಆರ್‍ಟಿ ನಗರದ ಸುಲ್ತಾನ ಪಾಳ್ಯ ಬನಶಂಕರಿ ಕಾಂಪ್ಲೆಕ್ಸ್‍ನ ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲಾಗುತ್ತಿತ್ತು ಎಂದು ತಿಳಿಸಿದ್ದಾರೆ.  

ಇವರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ಮತ್ತಿತರ ದಾಖಲಾತಿಗಳನ್ನು ತಮ್ಮ ಅಂಗಡಿಯ ಕಂಪ್ಯೂಟರ್‍ನಲ್ಲಿ ಸುಳ್ಳು ಸೃಷ್ಟಿ ಮಾಡಿ ತಮ್ಮ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಗೆ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸಹಕರಿಸುತ್ತಿದ್ದರು. ನಿಜವಾದ ಗುರುತಿನ ಚೀಟಿಗಳೆಂದು ಹೆಚ್ಚಿನ ಹಣಕ್ಕೆ ನೀಡಿ ಸರಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದರು.

ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್ ಮಾಲೀಕ ಮತ್ತು ಬೈರತಿ ಸುರೇಶ ಆಪ್ತ ಮೌನೇಶ್ ಕುಮಾರ್ ಹಾಗೂ ಈತನ ಕೃತ್ಯಕ್ಕೆ ಸಹಕರಿಸಿದ ಭಗತ್, ರಾಘವೇಂದ್ರ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ಮನವಿ ವಿವರಿಸಿ, ಅವರ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ನೀಡಲಾಗಿದೆ

Leave a Reply

Your email address will not be published. Required fields are marked *