ಅಥಣಿ : ತಾಲೂಕಿನ ಸಂಬರಗಿ ಗ್ರಾಮದಲ್ಲಿ ಹಳ್ಳಿ ಸೊಗಡಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪುಟಾಣಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ರಮುಖ ಬೀದಿಯಲ್ಲಿ ಕನ್ನಡ ಧ್ವಜ ಹಿಡಿದು ಮೆರವಣಿಗೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.
ಪಕ್ಕಾ ಹಳ್ಳಿ ಸೊಗಡಿನಲ್ಲಿ ಜೋಡೆತ್ತಿನ ಬಂಡಿ ಹುಡಿ ಅಲಂಕರಿಸಿ ತಾಯಿಯ ಭುವನೇಶ್ವರಿಯ ಫೋಟೋ ಮೆರವಣಿಗೆ ಮೂಲಕ ಪ್ರಮುಖ ಬೀದಿ ಬೀದಿಗಳಲ್ಲಿ ಕನ್ನಡದ ಕಂಪು ಸಾರುವ ನಾಡ ಗೀತೆಯೊಂದಿಗೆ ಗ್ರಾಮದೇವತೆ ಚಂದ್ರಗಿರಿ ದೇವಸ್ಥಾನದ ವರೆಗೂ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ಫೋಟೋ ಜೊತೆಗೆ ಕನ್ನಡ ರತ್ನ ನಟಸಾರ್ವಬೌಮ ದಿ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.