ಅಕ್ಕಿ ಮತ್ತು ಗೋಧಿ ಬೆಲೆ ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರವು ಒಎಂಎಸ್​ಎಸ್​ ಮೂಲಕ ಅವುಗಳನ್ನು ಮಾರಾಟ ಮಾಡಲಿದೆ. 2023-24ರ ಹಣಕಾಸು ವರ್ಷದ ಮೊದಲ ಹರಾಜು ಜೂನ್ 28 ರಂದು ನಡೆಯಲಿದೆ ಎಂದು ಭಾರತೀಯ ಆಹಾರ ನಿಗಮ ಹೇಳಿದೆ.

ಅನ್ನಭಾಗ್ಯಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ: ಸಿದ್ದರಾಮಯ್ಯ ಆರೋಪಕ್ಕೆ FCI ತಿರುಗೇಟು

ಅಕ್ಕಿ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಮಾಡಿದ ಆರೋಪಕ್ಕೆ ಪರೋಕ್ಷವನ್ನು ಪರೋಕ್ಷವಾಗಿ ಅಲ್ಲಗಳೆದ ಭಾರತೀಯ ಆಹಾರ ನಿಗಮ

ದಾಸ್ತಾನು ಇದ್ದರೂ ಅನ್ನಭಾಗ್ಯಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮಾಡಿರುವ ಆಪಾಧನೆಗೆ ಭಾರತೀಯ ಆಹಾರ ನಿಗಮ (FCI) ಪರೋಕ್ಷವಾಗಿ ತಿರುಗೇಟು ನೀಡಿದೆ. ಇಂದು ಸಂಜೆ ನೀಡಿದ ಪ್ರಕಟಣೆಯಲ್ಲಿ ತಾರ್ಕಿಕವಾಗಿ ಸಿದ್ದರಾಮಯ್ಯ ಅವರು ಮಾಡಿದ ಆರೋಪವನ್ನು ಅಲ್ಲಗೆಳೆದಿದೆ. ಅಕ್ಕಿ ಮತ್ತು ಗೋಧಿ ಬೆಲೆ ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರವು ಒಎಂಎಸ್​ಎಸ್​ ಮೂಲಕ ಅವುಗಳನ್ನು ಮಾರಾಟ ಮಾಡಲಿದೆ. ಹೀಗೆ ಮಾರಾಟವಾದ ಸ್ಟಾಕ್​ಗಳು ಸಾರ್ವಜನಿಕರಿಗೆ ವೇಗವಾಗಿ ತಲುಪಲು ಸಾಧ್ಯವಾಗಲಿದೆ. 2023-24ರ ಹಣಕಾಸು ವರ್ಷದ ಮೊದಲ ಹರಾಜು ಜೂನ್ 28 ರಂದು ನಡೆಯಲಿದೆ ಎಂದು ಎಫ್​ಸಿಐ ಹೇಳಿದೆ.

15 ವರ್ಷಗಳಲ್ಲಿ ಮೊದಲ ಬಾರಿ ಏರುತ್ತಿರುವ ಗೋಧಿ ಬೆಲೆ ನಿಯಂತ್ರಿಸಲು ಮಾರ್ಚ್ 24, 2024ರ ವರೆಗೆ ದಾಸ್ತಾನು ಮಿತಿ ವಿಧಿಸಿದೆ. ಮುಕ್ತ ಮಾರುಕಟ್ಟೆ ಒಎಂಎಸ್​ಎಸ್​ ಅಡಿಯಲ್ಲಿ ಮೊದಲ ಹಂತದಲ್ಲಿ ಕೇಂದ್ರ ಬೃಹತ್ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ 1.5 ಮಿಲಿಯನ್ ಟನ್ ಗೋಧಿ ಮಾರಾಟ ಮಾಡಲು ನಿರ್ಧರಿಸಿದೆ. ಗೋಧಿಯ ಹೊರತಾಗಿ ಅಕ್ಕಿ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸರ್ಕಾರದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ ಬೆಲೆಗಳು ನಿಯಂತ್ರಣ ಬಾರದ ಹಿನ್ನೆಲೆ ಬೆಲೆ ನಿಯಂತ್ರಿಸಲು ಮುಕ್ತ ಮಾರುಕಟ್ಟೆ ಮೂಲಕ ಅಕ್ಕಿ ಮತ್ತು ಗೋಧಿಯನ್ನು ಮಾರಾಟ ಮಾಡಲು ನಿರ್ಧರಿಸಿದೆ. ಸಗಟು ಮತ್ತು ಚಿಲ್ಲರೆ ಬೆಲೆಗಳು ಅಷ್ಟಾಗಿ ಏರಿಕೆಯಾಗದಿದ್ದರೂ ಸರ್ಕಾರ ಗೋಧಿ ಮೇಲೆ ದಾಸ್ತಾನು ಮಿತಿಯನ್ನು ವಿಧಿಸಿದೆ. 2024ರ ಮಾರ್ಚ್ 24 ರವರೆಗೆ ಸಗಟು ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು ಮಾರಾಟಗಾರರ ಮೇಲೆ ಈ ದಾಸ್ತಾನು ಮಿತಿ ಅನ್ವಯಿಸಲಿದೆ. ಮಾರುಕಟ್ಟೆಯಲ್ಲಿ ಗೋಧಿಯ ಕೃತಕ ಸೆಳೆತಯವನ್ನು ಕಡಿಮೆ ಮಾಡುವುದು ಕೂಡ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದೆ.

ಪರಿಸ್ಥಿತಿ ನಿಯಂತ್ರಿಸಲು ಮತ್ತು ಪೂರೈಕೆ ಒಪ್ಪಂದವನ್ನು ಪೂರೈಸಲು ಸರ್ಕಾರ ಈ ದಾಸ್ತಾನು ಮಿತಿ ವೀಧಿಸಿದೆ. ಗೋಧಿ ಹೊರತಾಗಿಯೂ ಒಎಂಎಸ್​ಎಸ್​ ಅಡಿ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಸಗಟು ವ್ಯಾಪಾರಿಗೆ 3000 ಮೆಟ್ರಿಕ್ ಟನ್ ಮತ್ತು ಚಿಲ್ಲರೆ ವ್ಯಾಪಾರಿಗೆ 10-100 ಮೆಟ್ರಿಕ್ ಟನ್​ಗಳಷ್ಟು ದಾಸ್ತಾನು ಮಿತಿ ವಿಧಿಸಲಾಗಿದೆ.

ಕೇಂದ್ರ ಸರ್ಕಾರದ ಮೇಲೆ ಸಿದ್ದರಾಮಯ್ಯ ಆರೋಪ

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಲು 2,08,425 ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ಇದನ್ನು ಕೊಡಲು ಕೇಂದ್ರವು ಒಪ್ಪಿಕೊಂಡಿತ್ತು. ಕೇಂದ್ರದ ಒಪ್ಪಿಗೆ ಆಧಾರದಲ್ಲಿ ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೆವು. ಇದಾದ ಬಳಿಕ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. 13ರಂದು ಒಂದು ಪತ್ರ ಬರೆದು ರಾಜ್ಯ ಸರ್ಕಾರಗಳಿಗೆ ಸೇಲಂ ಗೋಧಿ ಹಾಗೂ ಅಕ್ಕಿ ಕೊಡಲು ಆಗಲ್ಲವೆಂದು ತಿಳಿಸಿದೆ. ಕೇಂದ್ರ ಸರ್ಕಾರ ರಾಜಕೀಯ ತೀರ್ಮಾನ ಮಾಡಿ ಕರ್ನಾಟಕ ಸರ್ಕಾರಕ್ಕೆ ಅಕ್ಕಿ ಕೊಡಬಾರದು ಅಂತ ಈ ರೀತಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.

Leave a Reply

Your email address will not be published. Required fields are marked *