ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳು ಪೂರೈಸುತ್ತಾ ಬಂದಿದ್ದು, ದಾಳಿ ನಿಲ್ಲಿಸುವಂತೆ ಅಮೆರಿಕ ಮಾಡಿಕೊಂಡ ಮನವಿಯನ್ನು ಇಸ್ರೇಲ್ ತಿರಸ್ಕರಿಸಿದ್ದು, ದಾಳಿಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದೆ.

ಗಾಜಾ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ. ಶುಕ್ರವಾರ ತಡರಾತ್ರಿ ಆಂಬುಲೆನ್ಸ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದರಿಂದ 15 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇಸ್ರೇಲ್ ದಾಳಿಯಿಂದ ಪ್ಯಾಲೆಸ್ತೇನ್ ನಲ್ಲಿ ಮೃತಪಟ್ಟವರ ಸಂಖ್ಯೆ 9227ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 3826 ಮಕ್ಕಳು ಸೇರಿದ್ದಾರೆ. ಹಮಾಸ್ ದಾಳಿಯಿಂದ 1400 ಇಸ್ರೇಲಿಯನ್ನರು ಅಸುನೀಗಿದ್ದಾರೆ.

Leave a Reply

Your email address will not be published. Required fields are marked *