ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಗುರುವಾರ ತೀರ್ಪು ನೀಡಿದೆ. ಜೊತೆಗೆ, ಡಿ.ಕೆ. ಶಿವಕುಮಾರ್ ವಿರುದ್ಧದ ಆರೋಪ ಸಂಬಂಧ ತನಿಖೆ ನಡೆದು ಸತ್ಯಾಂಶ ಹೊರಬರಬೇಕಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಈ ಎಫ್ಐಆರ್ ರದ್ದು ಗೊಳಿಸುವಂತೆ ಕೋರಿ ಡಿಕೆಶಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಕೆ,ನಟರಾಜನ್ ಅವರಿದ್ದ ನಾಯಪೀಠ ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ,ಆದೇಶವನ್ನು ಕಾಯ್ದಿರಿಸಿತ್ತು.

Leave a Reply

Your email address will not be published. Required fields are marked *