ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂದು ಮಾಜಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದರು.

ಕೇದಾರನಾಥದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ವರ್ಷ ಇರಲೆಂಬುದು ನಮ್ಮ ಆಶಯ. ಆದರೆ, ಬಿಟ್ಟಿ ಭಾಗ್ಯಗಳನ್ನು ನೀಡಿ ತಮ್ಮ ತಮ್ಮೊಳಗೆ ಕಚ್ಚಾಡುತ್ತಿರುವ ಕಾಂಗ್ರೆಸ್‌ ಮುಖಂಡರಿಂದಲೇ ಸರ್ಕಾರ ನೆಲಕಚ್ಚುವ ಸಮಯ ದೂರವಿಲ್ಲ.

ಆಪರೇಷನ್‌ ಹಸ್ತ ಎಂದು ಕೆಲ ಕಾಂಗ್ರೆಸ್‌ ನಾಯಕರು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದ್ದು, ಇನ್ನೇನಿದ್ದರೂ ಆಪರೇಷನ್‌ ಕಮಲ ಖಚಿತ ಎಂದರು.

Leave a Reply

Your email address will not be published. Required fields are marked *