ನ್ಯೂಜಿಲೆಂಡ್ ವಿರುದ್ಧದ ಐದನೇ ಪಂದ್ಯದಲ್ಲಿ ಆಡದ ಹಾಗೂ ನಾಲ್ಕನೇ ಪಂದ್ಯದಲ್ಲಿ ಕೇವಲ ೩ ಎಸೆತಗಳನ್ನು ಎಸೆದಿದ್ದ ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದೆ.
ಅಕ್ಟೋಬರ್ ೨೯ರಂದು ಭಾನುವಾರ ಲಕ್ನೋದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುತ್ತಿಲ್ಲ.
ಹಾರ್ದಿಕ್ ಪಾಂಡ್ಯ ಭಾನುವಾರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಅವರಿಗೆ ಆಗಿರುವ ಗಾಯವು ಗಂಭೀರವಾಗಿಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಮುಂದಿನ ಪಂದ್ಯದಿಂದಲೂ ಹೊರಗಿಡಲು ತೀರ್ಮಾನಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಮುಂಬರುವ ಪಂದ್ಯಗಳಿಗೆ ಹಾರ್ದಿಕ್ ಪಾಂಡ್ಯ ಸಂಪೂರ್ಣವಾಗಿ ಫಿಟ್ ಆಗಬೇಕೆಂದು ತಂಡದ ಮ್ಯಾನೇಜ್‌ಮೆಂಟ್ ಬಯಸಿದೆ. ಇಂತಹ ಪರಿಸ್ಥಿತಿಯಲ್ಲಿ ಹಾರ್ದಿಕ್ ಚೇತರಿಸಿಕೊಳ್ಳಲು ಇನ್ನೂ ಸ್ವಲ್ಪ ಕಾಲಾವಕಾಶ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.