ಇನ್ನು ಮುಂದೆ ರಾಮನಗರ ಜಿಲ್ಲೆ ಇರುವುದಿಲ್ಲ. ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಮರು ಸೇರ್ಪಡೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯನ್ನು ಬೆಂಗಳೂರು ಜಿಲ್ಲೆಗೆ ಮರು ಸೇರ್ಪಡೆಗೊಳಿಸಲು ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಡಿಸಲಾಗುವುದು ಎಂದರು.
ಕನಕಪುರದಲ್ಲಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ದೇವರ ಪ್ರಮಾಣ ಮಾಡಿದ ಅವರು, ರಾಮನಗರ ಜಿಲ್ಲೆಯನ್ನು ಮರು ನಾಮಕರಣ ಮಾಡಲಾಗುವುದು. ನಾವೆಲ್ಲರೂ ಬೆಂಗಳೂರಿನವರು ಬೆಂಗಳೂರು ಜಿಲ್ಲೆಯವರು. ನಾನು ಹೇಳಿದ ಮೇಲೆ ಮಾಡಿಯೇ ಮಾಡುತ್ತೇನೆ ಎಂದು ಅವರು ಹೇಳಿದರು.
ಯಾರೋ ಕೆಲವರು ತಮ್ಮ ಹಿತಾಸಕ್ತಿಗಾಗಿ ರಾಮನಗರ ಜಿಲ್ಲೆ ಮಾಡಿದರು. ರೈತರು ತಮ್ಮ ಜಮೀನು ಮಾರಬೇಡಿ. ಇದರಿಂದ ಒಳ್ಳೆಯ ಬೆಲೆ ಸಿಗುತ್ತದೆ. ವಿಜಯ ದಶಮಿ ದಿನ ಹೇಳುತ್ತಿದ್ದೇನೆ. ಬೆಂಗಳೂರು ಜಿಲ್ಲೆ ಆಗುತ್ತದೆ. ಅಡಿ ಲೆಕ್ಕದಲ್ಲಿ ಬಂಗಾರದ ಬೆಲೆ ಬರುತ್ತದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.