ಕೊಲ್ಕತ್ತಾ: ಒಡಿಶಾದ ಬಾಲಾಸೋರ್‌ನಲ್ಲಿ ನಡೆದ ರೈಲು ಅಪಘಾತದ (Odisha Train Accident) ಸ್ಥಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಹಲವರು ಗಂಭೀರ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ (West Bengal) ಮೇದಿನಿಪುರದಲ್ಲಿ ನಡೆದಿದೆ.

ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಬಸ್ಸಿನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲದೆ ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಆ ಮಾರ್ಗದ 58ಕ್ಕೂ ಹೆಚ್ಚು ರೈಲನ್ನು ರದ್ದು ಮಾಡಲಾಗಿದೆ. ಅಲ್ಲದೆ 81 ರೈಲುಗಳನ್ನು ಮಾರ್ಗ ಬದಲಾವಣೆ ಮಾಡಲಾಗಿದೆ.

Leave a Reply

Your email address will not be published. Required fields are marked *