ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಮ್ಮ ನಾಯಕರು. ರೈತರ ಪರ ಹೋರಾಡಿದವರು. ಅವರು ಕಾಂಗ್ರೆಸ್ ನವರನ್ನು ನಾಯಿ-ನರಿಗಳಿಗೆ ಹೋಲಿಸಬಾರದಿತ್ತು. ಅವುಗಳಿಗೆ ಬೇಸರವಾಗುತ್ತದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ ನಂತರ ಮರಳಿದ ಅವರು ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದೆ ನಾಯಿ-ನರಿಗಳು ಇದೇ ವಿಷಯಕ್ಕೆ ಪ್ರತಿಭಟನೆ ಮಾಡಬಹುದು ಎಂದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ವರ್ಗಾವಣೆ ದಂಧೆಯಲ್ಲಿ ತೊಡಗಿದೆ.  ದೆಹಲಿಗೆ ಹೋದಾಗ ನಾನು ಇದೇ ವಿಷಯವನ್ನು ಪ್ರಸ್ತಾಪ ಮಾಡಿದೆ. ನಾನು ಹುಟ್ಟಿದಾಗಿನಿಂದ ಇಂತಹ ಬರ ನೋಡಿಲ್ಲ ಅಂತ ಹೇಳಿದ್ದಕ್ಕೆ ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ ಎಂದು ಕೇಳಿದಾಗ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದೇನೆ ಎಂದು ಈಶ್ವರಪ್ಪ ವಿವರಿಸಿದರು.

ಮೋದಿ ವಿಶ್ವ ನಾಯಕ. ಅವರನ್ನು ಸಿದ್ದರಾಮಯ್ಯ ಏಕವಚನದಲ್ಲಿ ನಿಂದಿಸುತ್ತಾರೆ. ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ನಾನೇ 5 ವರ್ಷ ಸಿಎಂ ಅನ್ನುತ್ತಾರೆ. ಅವರಿಗೆ ನಾಚಿಕೆ ಆಗಬೇಕು ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *