ಚೆನ್ನೈ: ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗೆ ವಿಸ್ತರಿಸಿದ್ದ ಕಾರ್ಖಾನೆಗಳ ತಿದ್ದುಪಡಿ ಕಾಯ್ದೆ 2023 ಅನ್ನು (Factories Amendment Act 2023) ಕಾರ್ಮಿಕರ (Labor)  ಹಿತದೃಷ್ಟಿಯಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡಿನ (Tamil Nadu) ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ (M K Stalin) ಸೋಮವಾರ ಹೇಳಿದ್ದಾರೆ.

ಮೇ ಡೇ ಪಾರ್ಕ್‌ನಲ್ಲಿ ಮೇ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಸ್ಟಾಲಿನ್, ಕಾರ್ಖಾನೆಗಳ ತಿದ್ದುಪಡಿ ಕಾಯಿದೆ 2023, ಕೈಗಾರಿಕೆಗಳಿಗೆ ದಿನಕ್ಕೆ 12 ಗಂಟೆ ಎಂದರೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಗಳವರೆಗೆ ಇದ್ದ ಕೆಲಸದ ಸಮಯವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಮಿಕರ ಕಲ್ಯಾಣ ದೃಷ್ಟಿಯಿಂದ ನಾವು ಯಾವುದೇ ಪರಿಸ್ಥಿತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಕೈಗಾರಿಕೆಗಳು ಬೆಳೆಯಬೇಕು ಮತ್ತು ಕಾರ್ಮಿಕರ ಏಳಿಗೆಯಾಗಬೇಕು. ನಾನು ಎಂದಿಗೂ ಮಣಿಯುವುದನ್ನು ಅವಮಾನ ಎಂದು ಪರಿಗಣಿಸಲ್ಲ. ನಾನು ಅದನ್ನು ಹೆಮ್ಮೆಯ ವಿಷಯ ಎಂದು ಪರಿಗಣಿಸಿದ್ದೇನೆ. ಏಕೆಂದರೆ ಶಾಸನವನ್ನು ಖಚಿತಪಡಿಸಿಕೊಳ್ಳಲು ಹಾಗೂ ಮಸೂದೆಯನ್ನು ಹಿಂಪಡೆಯಲು ಧೈರ್ಯ ಬೇಕಾಗುತ್ತದೆ ಎಂದರು.

ಏಪ್ರಿಲ್ 21 ರಂದು ತಮಿಳುನಾಡು ವಿಧಾನಸಭೆಯು ಕಾರ್ಖಾನೆಗಳ ತಿದ್ದುಪಡಿ ಕಾಯ್ದೆ 2023 ಅನ್ನು ಅಂಗೀಕರಿಸಿತು. ಇದು ರಾಜ್ಯದಾದ್ಯಂತ ಕಾರ್ಖಾನೆಗಳಲ್ಲಿನ ಉದ್ಯೋಗಿಗಳಿಗೆ 12 ಗಂಟೆಗಳವರೆಗೆ ಕಡ್ಡಾಯ ಕೆಲಸದ ಸಮಯವನ್ನು ವಿಸ್ತರಿಸಿತ್ತು. ಆದರೆ ಈ ಕಾಯ್ದೆ ವಿರುದ್ಧ ಹಲವು ವಿಪಕ್ಷಗಳು ಹಾಗೂ ಕಾರ್ಮಿಕರು ಪ್ರತಿಭಟನೆ ನಡೆಸಿರುವ ಹಿನ್ನೆಲೆ ಕಾರ್ಮಿಕರ ಹಿತದೃಷ್ಟಿಯಿಂದ ಇದನ್ನು ಹಿತೆಗೆದುಕೊಳ್ಳಲಾಗಿದೆ. 

By admin

Leave a Reply

Your email address will not be published. Required fields are marked *