ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ 5 ರನ್ ಗಳಿಂದ ಶತಕ ವಂಚಿತರಾದರೂ ಭಾರತ ತಂಡಕ್ಕೆ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಗಳ ರೋಚಕ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ ಮೊಹಮದ್ ಶಮಿ ಮಾರಕ ದಾಳಿಗೆ ತತ್ತರಿಸಿ 49.5 ಓವರ್ ಗಳಲ್ಲಿ 273 ರನ್ ಗೆ ಆಲೌಟ್ ಮಾಡಿದರು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಭಾರತ ತಂಡ 48 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಭಾರತ ತಂಡ ಈ ಗೆಲುವಿನೊಂದಿಗೆ ಅಜೇಯ ತಂಡವಾಗಿ ವಿಶ್ವಕಪ್ ನ ಲೀಗ್ ಹಂತದಲ್ಲಿ ಅಗ್ರಸ್ಥಾನಕ್ಕೇರಿದರೆ, ನ್ಯೂಜಿಲೆಂಡ್ ಟೂರ್ನಿಯಲ್ಲಿ ಮೊದಲ ಬಾರಿ ಸೋಲಿನ ರುಚಿ ಅನುಭವಿಸಿತು.

ವಿರಾಟ್ ಕೊಹ್ಲಿ 104 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 95 ರನ್ ಗಳಿಸಿದ್ದಾಗ ಹೆನ್ರಿ ಎಸೆತದಲ್ಲಿ ಔಟಾಗಿ 5 ರನ್ ಗಳಿಂದ ಶತಕ ವಂಚಿತರಾದರು. ಈ ಮೂಲಕ ಕೊಹ್ಲಿ 49 ಶತಕ ಬಾರಿಸಿ ಸಚಿನ್ ದಾಖಲೆ ಸರಿಗಟ್ಟುವ ಅವಕಾಶ ಕೈ ತಪ್ಪಿತು.

ಭಾರತ ತಂಡಕ್ಕೆ ರೋಹಿತ್ ಶರ್ಮ 40 ಎಸೆತಗಳಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 46 ರನ್ ಬಾರಿಸಿದರೆ, ಶುಭಮನ್ ಗಿಲ್ 31 ಎಸೆತಗಳಲ್ಲಿ 5 ಬೌಂಡರಿ ಸಹಾಯದಿಂದ 26 ರನ್ ಗಳಿಸಿ ಮೊದಲ ವಿಕೆಟ್ ಗೆ 71 ರನ್ ಜೊತೆಯಾಟದಿಂದ ಉತ್ತಮ ಆರಂಭ ನೀಡಿದರು.
ಶ್ರೇಯಸ್ ಅಯ್ಯರ್ 29 ಎಸೆತಗಳಲ್ಲಿ 6 ಬೌಂಡರಿ ಸಹಾಯದಿಂದ 33 ರನ್ ಗಳಿಸಿದರೆ, ರವೀಂದ್ರ ಜಡೇಜಾ 44 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 39 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದಕ್ಕೂ ಮುನ್ನ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಡ್ರೈಲ್ ಮಿಚೆಲ್ ಸಿಡಿಸಿದ ಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡ ವಿಶ್ವಕಪ್ ಪಂದ್ಯದಲ್ಲಿ ಭಾರತಕ್ಕೆ 273 ರನ್ ಗುರಿ ಒಡ್ಡಿದೆ.

ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 273 ರನ್ ಸಂಪಾದಿಸಿತು.

ನ್ಯೂಜಿಲೆಂಡ್ 19 ರನ್ ಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿದ್ದರೂ ರಚಿಮ್ ರವೀಂದ್ರ ಮತ್ತು ಡ್ರೈಲ್ ಮಿಚೆಲ್ ಶತಕದ ಜೊತೆಯಾಟದಿಂದ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು.

ರಚಿಮ್ ರವೀಂದ್ರ ಮತ್ತು ಡ್ರೈಲ್ ಮಿಚೆಲ್ 3ನೇ ವಿಕೆಟ್ ಗೆ 159 ರನ್ ಜೊತೆಯಾಟ ನಿಭಾಯಿಸಿದರು. ರವೀಂದ್ರ 87 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ 75 ರನ್ ಸಿಡಿಸಿದರೆ, ಡ್ರೈಲ್ ಮಿಚೆಲ್ 127 ಎಸೆತಗಳಲ್ಲಿ 9 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 130 ರನ್ ಗಳಿಸಿ ಕೊನೆಯಲ್ಲಿ ಔಟಾದರು.

ವಿಶ್ವಕಪ್ ನಲ್ಲಿ ಈ ಬಾರಿ ಮೊದಲ ಪಂದ್ಯವಾಡಿ ಭಾರತದ ಪರ ಮಾರಕ ದಾಳಿ ಸಂಘಟಿಸಿದ ಮೊಹಮದ್ 5 ವಿಕೆಟ್ ಪಡೆದು ಕಿವೀಸ್ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

Leave a Reply

Your email address will not be published. Required fields are marked *