ವಿಜಯನಗರ ಜಿಲ್ಲೆಯನ್ನ ಮತ್ತೆ ಬಳ್ಳಾರಿಗೆ ಸೇರ್ಪಡೆ ಮಾಡಲು ಎಲ್ಲ ಜನಪ್ರತಿನಿಧಿಗಳು ಒಪ್ಪಿದರೇ ತೀರ್ಮಾನ ಕೈಗೊಳ್ಳಲು ಸಿದ್ದ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ.

ಬಳ್ಳಾರಿ: ದೊಡ್ಡ ಜಿಲ್ಲೆಯಾಗಿದ್ದ ಬಳ್ಳಾರಿಯನ್ನು (Bellary) ಎರಡು ಜಿಲ್ಲೆಗಳನ್ನಾಗಿ ಮಾಡಲಾಗಿದೆ. ಇದೀಗ ಮತ್ತೆ ಬಳ್ಳಾರಿ ಜಿಲ್ಲೆಯಲ್ಲಿ ನೂತನ ವಿಜಯನಗರ (Vijayanagr) ಜಿಲ್ಲೆಯನ್ನು ವಿಲೀನ ಮಾಡುವ ವಿಚಾರವಾಗಿ ಕ್ರೀಡಾ ಮತ್ತು ಯುವಜನ ಇಲಾಖೆ ಸಚಿವ ನಾಗೇಂದ್ರ (Nagendra) ಮಾತನಾಡಿ ವಿಜಯನಗರ ಜಿಲ್ಲೆಯನ್ನ ಮತ್ತೆ ಬಳ್ಳಾರಿಗೆ ಸೇರ್ಪಡೆ ಮಾಡಲು ಎಲ್ಲ ಜನಪ್ರತಿನಿಧಿಗಳು ಒಪ್ಪಿದರೇ ತೀರ್ಮಾನ ಕೈಗೊಳ್ಳಲು ಸಿದ್ದ. ಅಖಂಡ ಬಳ್ಳಾರಿ ಜಿಲ್ಲೆಯನ್ನಾಗಿ ಮಾಡಲು ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿ ಚರ್ಚೆ ಮಾಡುವೆ ಎಂದು ಕ್ರೀಡಾ ಮತ್ತು ಯುವಜನ ಇಲಾಖೆ ಸಚಿವ ನಾಗೇಂದ್ರ ಹೇಳಿದ್ದಾರೆ.

2021ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಬ್ರವರಿ 8ರಂದು ಬಳ್ಳಾರಿಯಿಂದ ವಿಜಯನಗರವನ್ನು ಬೇರ್ಪಡಿಸಿ ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆ ಮಾಡಲಾಯಿತು. 2021ಅಕ್ಟೋಬರ್ 2 ರಿಂದ ರಾಜ್ಯದ 31ನೇ ಜಿಲ್ಲೆಯಾಗಿ ಕಾರ್ಯಾರಂಭ ಮಾಡಿತು. ಆದರೆ ಇದಕ್ಕೆ ಸಚಿವ ನಾಗೇಂದ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಮತ್ತೆ ಅಖಂಡ ಬಳ್ಳಾರಿ ಜಿಲ್ಲೆಯನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು.

ಇದೀಗ ವಿಜಯನಗರ ಜಿಲ್ಲೆಯನ್ನ ಮತ್ತೆ ಬಳ್ಳಾರಿಗೆ ಸೇರ್ಪಡೆ ಮಾಡಲು ಸಚಿವರು ಉತ್ಸಾಹ ತೋಡಿದ್ದು, ವಿಜಯನಗರ ಜಿಲ್ಲೆಯನ್ನ ಬಳ್ಳಾರಿಗೆ ಸೇರ್ಪಡೆ ಮಾಡಿ ಅಖಂಡ ಬಳ್ಳಾರಿ ಜಿಲ್ಲೆಯನ್ನಾಗಿ ಮಾಡಲು ಕಂಕಣ ಕಟ್ಟಿಕೊಂಡಿದ್ದಾರೆ.

ಇನ್ನು ವಿಜಯನಗರ ಜಿಲ್ಲೆ ಸ್ಥಾಪನೆ ವಿಚಾರವಾಗಿ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಮಾಜಿ ಸಚಿವ ಆನಂದಸಿಂಗ್ ರಾಜೀನಾಮೆ ನೀಡಿದ್ದರು. ನಂತರ ವಿಜಯನಗರ ಜಿಲ್ಲೆ ಸ್ಥಾಪನೆಯಾಗದ ಪರಿಣಾಮ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದರು.

Leave a Reply

Your email address will not be published. Required fields are marked *

Latest News