ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ದಾವಣಗೆರೆ:  ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ. ಬಜೆಟ್‌ ಅಧಿವೇಶನ ಬಗ್ಗೆ ಇನ್ನೂ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಿಲ್ಲ. ಆದರೆ ಜುಲೈ 3 ರಂದು ಬಜೆಟ್ ಅಧಿವೇಶನ ಪ್ರಾರಂಭ ಆಗಲಿದೆ. 1 ವಾರ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಬಳಿಕ ಶುಕ್ರವಾರ ಬಜೆಟ್ ಮಂಡನೆ ಆಗಲಿದೆ ಎಂದರು.

ಬಜೆಟ್ ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಭಾಷಣ ಮಾಡಲಿದ್ದಾರೆ. ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತದೆ. ಬಜೆಟ್ ಅಧಿವೇಶನವು ಜುಲೈ 3 ರಿಂದ ಆರಂಭವಾಗಲಿದ್ದು ಬಜೆಟ್ ಮಂಡನೆಯನ್ನು ಜುಲೈ 7 ಶುಕ್ರವಾರ ಮಂಡಿಸಲು ವಿವಿಧ ಹಂತದ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ರೈತರಿಗೆ ಬಿತ್ತನೆ ಬೀಜ, ಕೀಟನಾಶಕಗಳ ಪೂರೈಕೆಯಲ್ಲಿ ಲೋಪವಾಗದಂತೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿದರು.

ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡುತ್ತೇವೆ. 1964 ಆಕ್ಟ್‌ ಪ್ರಕಾರ, 12 ವರ್ಷ ಮೇಲ್ಟಟ್ಟ ವಯಸ್ಸಾಗಿರುವ ರಾಸುಗಳು, ಬರಡು ರಾಸುಗಳು ಹಾಗೂ ವ್ಯವಸಾಯಕ್ಕೆ ಉಪಯೋಗಕ್ಕೆ ಬಾರದ ರಾಸುಗಳು ಎಂದು ಹೇಳಿದ್ದಾರೆ. ಆಕ್ಟ್ 1964 ನಲ್ಲೇ ಆಕ್ಟ್‌ ಆಗಿದೆ. ಈ ಬಗ್ಗೆ ಇನ್ನೂ ಏನೂ ತೀರ್ಮಾನ ಆಗಿಲ್ಲ. ಕ್ಯಾಬಿನೆಟ್ ನಲ್ಲಿ ಚರ್ಚಿಸುತ್ತೇವೆ ಎಂದರು.

Leave a Reply

Your email address will not be published. Required fields are marked *