ಗಂಡ-ಹೆಂಡತಿ ಜಗಳದಲ್ಲಿ ಪೋಲಿಸರ ಸಂಧಾನದಕ್ಕೆ ಬೇಸತ್ತು ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.
11 ತಿಂಗಳ ಹಿಂದೆಯಷ್ಟೇ ಪ್ರೀತಿ ಎಂಬ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ನಿಖಿಲ್ (28) ಆತ್ಮಹತ್ಯೆ ಮಾಡಿಕೊಂಡ ಪತಿ.
ಗಂಡ -ಹೆಂಡತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೆ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಪತ್ನಿ ತವರು ಮನೆಗೆ ಹೋಗಿದ್ದರು.
ನಿಖಿಲ್ ಪತ್ನಿ ಪ್ರೀತಿ ಮತ್ತು ಕುಟುಂಬಸ್ಥರು ನಿನ್ನೆ ಕೇಶ್ವಾಪುರ ಠಾಣೆಗೆ ನಿಖಿಲ್ ಕರೆಯಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ನೋಟಿಸ್ ನೀಡಿ ನಿಖಿಲ್ ನನ್ನು ಠಾಣೆ ಕರೆಸಿ ಪೋಲಿಸರು ಮಾನಸಿಕ ಕಿರುಕುಳ ಆರೋಪ ನೀಡಿರುವ ಆರೋಪ ಕೇಳಿ ಬಂದಿದೆ.
ಪೊಲೀಸರು ಒಂದೇ ದಿನದಲ್ಲಿ 2 ಲಕ್ಷ ರೂಪಾಯಿ ನೀಡುವಂತೆ ತಾಕೀತು ಮಾಡಿ ನಿಖಿಲ್ ನನ್ನು ಬಿಟ್ಟು ಕಳುಹಿಸಿದ್ದರು. ಇದರಿಂದ ನೊಂದು ಮನೆಗೆ ಬಂದು ಇಂದು ಬೆಳಗಿನ ಜಾವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.