ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ದೇಶಕ ಮಿಲನ ಪ್ರಕಾಶ್ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ ಸೆಟ್ಟೇರಿದ್ದು, ಬೆಂಗಳೂರಿನಲ್ಲಿ ಸದ್ದಿಲ್ಲದೇ ಮುಹೂರ್ತ ಜರುಗಿದೆ.

ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್ ಅವರ ಹೊಸ ಸಿನಿಮಾದ (New Cinema) ಮಹೂರ್ತ ಸದ್ದಿಲ್ಲದೇ ನಡೆದಿದೆ. ಈ ಸಿನಿಮಾಗೆ ತಾತ್ಕಾಲಿಕವಾಗಿ ‘ಡಿ-57 ‘ ಎಂದು ಹೆಸರಿಟ್ಟು ಮಹೂರ್ತ ಮಾಡಲಾಗಿದೆ.

ಹಲವು ಸಮಯದಿಂದ ಮಿಲನ ಪ್ರಕಾಶ್ ಮತ್ತು ದರ್ಶನ್ ಕಾಂಬಿನೇಷನ್ ನಲ್ಲಿ ಚಿತ್ರದ ಸಿದ್ಧತೆ ನಡೆದಿದೆ ಎಂಬ ಸುದ್ದಿಗಳು ಹರಡಿದ್ದವು. ಕಾಟೇರ ಚಿತ್ರದಲ್ಲಿ ದರ್ಶನ್ ಬ್ಯೂಸಿ ಆಗಿದ್ದರಿಂದ ಈ ಚಿತ್ರ ಸೆಟ್ಟೇರುವ ಬಗ್ಗೆ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ.

ಮಿಲನ ಪ್ರಕಾಶ್ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ.

Leave a Reply

Your email address will not be published. Required fields are marked *