ವಿಶ್ವವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ. ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ನಿಭಾಯಿಸಿದ ದಸರಾ ಗಜಪಡೆ ಇಂದು ನಾಡಿನಿಂದ ಕಾಡಿನತ್ತ ಪ್ರಯಾಣ ಬೆಳೆಸಿವೆ.
ಕಾಡಿಗೆ ಹೊರಟ ಆನೆಗಳಿಗೆ ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಯ್ತು. ಒಲ್ಲದ ಮನಸಿನಲ್ಲೇ ಗಜಪಡೆಗಳು ಕಾಡಿನತ್ತ ಮುಖ ಮಾಡಿದವು. ಮಾವುತರು ಕಾವಾಡಿಗಳ ಕೋರಿಕೆ ಮೇರೆಗೆ ಈ ಬಾರಿ ಅವರಿಗೆ ಹೆಚ್ಚು ಗೌರವಧನ ನೀಡಲಾಗಿದೆ.
ಕಳೆದ ವರ್ಷ ತಲಾ ಹತ್ತು ಸಾವಿರ ಗೌರವ ಧನ ನೀಡಲಾಗಿತ್ತು. ಈ ಬಾರಿ 55 ಮಂದಿಗೆ ತಲಾ 15 ಸಾವಿರ ರೂ. ಗೌರವ ಧನ ನೀಡಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ ಹೇಳಿದ್ದಾರೆ.