ಬೆಂಗಳೂರು: ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್, ಡಿಎಲ್ ತಯಾರು ಮಾಡುತ್ತಿದ್ದ ಆರೋಪದ ಮೇಲೆ ಸಚಿವ ಬೈರತಿ ಸುರೇಶ್ರವರ ಅಪ್ತನಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ.

ಮೌನೇಶ್ ಎಂಬಾತನಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದ್ದು, ಈತನು ಬೈರತಿ ಸುರೇಶ್ ಅವರ ಅಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದನು. ಖಚಿತ ಮಾಹಿತಿ ಆಧರಿಸಿ ಹೆಬ್ಬಾಳದ ಕನಕನಗರದ ಕಚೇರಿ ಮೇಲೆ ದಾಳಿ ನಡೆಸಿ ಮೌನೇಶ್, ಭಗತ್ ಮತ್ತು ರಾಘವೇಂದ್ರ ಎಂಬ ಮೂವರನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳು ಹೆಬ್ಬಾಳದಲ್ಲಿ ಹಣ ನೀಡಿದರೆ ನಕಲಿ ವೋಟರ್ ಐಡಿ, ಡಿಎಲ್, ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದರು ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಜನರು ಅವರು ಕೇಳಿದಷ್ಟು ಹಣ ನೀಡಿದರೆ ಯಾವುದೇ ಕ್ಷೇತ್ರದ ದಾಖಲೆಗಳನ್ನು ಮಾಡಿಕೊಡುತ್ತಿದ್ದರು.

ಈ ಎಲ್ಲ ವಿಷಯಗಳ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಹೆಬ್ಬಾಳದ ಕನಕನಗರದಲ್ಲಿರುವ ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *