ಲೋಕಸಭಾ ಚುನಾವಣೆ ಹೊತ್ತಲ್ಲಿ ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸಚಿವ ಭೈರತಿ ಸುರೇಶ್ ಆಪ್ತನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಸಚಿವರ ಆಪ್ತ ಮೌನೇಶ್ ಕುಮಾರ್ ಹಾಗೂ ಸಹಚರರಾದ ಭಗತ್ ಹಾಗೂ ರಾಘವೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಆರೋಪಿಗಳು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್ ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಆರೋಪಿಗಳು ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು ಎಂಬ ಆರೋಪದ ಮೇಲೆ ಕನಕನಗರದಲ್ಲಿರುವ ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ.
ಪೊಲೀಸರು ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ನಂತರ ಸಚಿವ ಭೈರತಿ ಸುರೇಶ್ ಆಪ್ತ ಎಂದು ತಿಳಿಯುತ್ತಿದ್ದಂತೆ ಬಿಡುಗಡೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.