ನಾರಾಯಣ ನೇತ್ರಾಲಯದ ಪ್ರಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಇಂದು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಇಂದು ಆಸ್ಪತ್ರೆಗೆ ಬಂದು ರೋಗಿಗಳಿಗೆ ಡಾ. ಭುಜಂಗ ಶೆಟ್ಟಿ ಚಿಕಿತ್ಸೆ ನೀಡಿದ್ದರು. ಮನೆಗೆ ತೆರಳಿದ ಬಳಿಕ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಅವರನ್ನು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆಗೆ ಕರೆತಂದರೂ ಡಾ.‌ಭುಜಂಗ ಶೆಟ್ಟಿ ಬದುಕುಳಿಯಲಿಲ್ಲ. ಸದ್ಯ ಮೃತದೇಹ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿದೆ. 

ಇನ್ನು ಎಂದಿನಂತೆ ಡಾ. ಭುಜಂಗ ಶೆಟ್ಟಿ ಕರ್ತವ್ಯಕ್ಕೆ‌ ಹಾಜರಾಗಿದ್ದರು. ಬೆಳಗ್ಗೆ ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳ ತಪಾಸಣೆ ನಡೆಸಿದ್ದರು. ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದೆ. ಅನಂತರ ತೀವ್ರ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ. ಸದ್ಯ ಆಸ್ಪತ್ರೆಗೆ ಕರೆತರುವ ವೇಳೆ ಹೃದಯ ಬಡಿತ ನಿಂತು ಹೋಗಿದೆ. ಆಸ್ಪತ್ರೆಯಲ್ಲಿ CPR ಮಾಡಿದ್ರು ಯಾವುದೇ ಪ್ರಯೋಜನವಾಗಲಿಲ್ಲ.

By admin

Leave a Reply

Your email address will not be published. Required fields are marked *