ಬೆಂಗಳೂರು: ನಾವು ತಾಜ್ ವೆಸ್ಟಂಡ್ ಹೋಟೆಲ್‌ ನಲ್ಲಿ ಕೂತು ಸರ್ಕಾರ ನಡೆಸಲ್ಲ. ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಟ್ವೀಟ್ ಮಾಡಿದ್ದಾರೆ.

ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ.

ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ಸರ್ಕಾರ ಮುಂದಾಗಿದೆ.

ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಸರ್ಕಾರ ಗಮನ ಹರಿಸಿದೆ.

Leave a Reply

Your email address will not be published. Required fields are marked *