1999 ರಲ್ಲಿ ಪವಾರ್ ಮತ್ತು ಪಿಎ ಸಂಗ್ಮಾ ಅವರು ಸ್ಥಾಪಿಸಿದ ಪಕ್ಷದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಹಿರಿಯ ನೇತಾರ ಈ ಘೋಷಣೆ ಮಾಡಿದ್ದಾರೆ.ಎನ್‌ಸಿಪಿಯ ಪ್ರಮುಖ ನಾಯಕ ಅಜಿತ್ ಪವಾರ್ ಅವರ ಸಮ್ಮುಖದಲ್ಲಿ ಈ ಘೋಷಣೆ ಮಾಡಲಾಗಿದೆ.
ಶರದ್ ಪವಾರ್
ದೆಹಲಿ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು ಸುಪ್ರಿಯಾ ಸುಳೆ (Supriya Sule) ಮತ್ತು ಪ್ರಫುಲ್ ಪಟೇಲ್ (Praful Patel) ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಘೋಷಿಸಿದ್ದಾರೆ. 1999 ರಲ್ಲಿ ಪವಾರ್ ಮತ್ತು ಪಿಎ ಸಂಗ್ಮಾ ಅವರು ಸ್ಥಾಪಿಸಿದ ಪಕ್ಷದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಹಿರಿಯ ನೇತಾರ ಈ ಘೋಷಣೆ ಮಾಡಿದ್ದಾರೆ.ಎನ್‌ಸಿಪಿಯ ಪ್ರಮುಖ ನಾಯಕ ಅಜಿತ್ ಪವಾರ್ ಅವರ ಸಮ್ಮುಖದಲ್ಲಿ ಈ ಘೋಷಣೆ ಮಾಡಲಾಗಿದೆ.
ಶರದ್ ಪವಾರ್ ಕಳೆದ ತಿಂಗಳು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಪಕ್ಷದ ಸದಸ್ಯರು ಮತ್ತು ಇತರ ರಾಜಕೀಯ ಮುಖಂಡರ ಒತ್ತಾಯಕ್ಕೆ ಮಣಿದು ರಾಜೀನಾಮೆ ವಾಪಸ್ ತೆಗೆದುಕೊಂಡಿದ್ದರು.ಪವಾರ್ ಅವರ ಪ್ರಸ್ತಾಪವನ್ನು ಚರ್ಚಿಸಲು ರಚಿಸಲಾದ ಎನ್‌ಸಿಪಿ ಸಮಿತಿಯು ಮೇ 5 ರಂದು ಅವರ ರಾಜೀನಾಮೆಯನ್ನು ತಿರಸ್ಕರಿಸಿತು ಮತ್ತು ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವಂತೆ ಒತ್ತಾಯಿಸಿತು.