ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2ರಿಂದ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ.
ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಶಿಫ್ಟ್ ಮಾಡುವಾಗ ಶೆಟಲ್ ಬಸ್ ಟಿ2 ಪಿಲ್ಲರ್ಗೆ ಡಿಕ್ಕಿ ಹೊಡೆಯಿತು. ಬಸ್ನಲ್ಲಿದ್ದ 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮುಂಜಾನೆ 5.15ಕ್ಕೆ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ವಿಮಾನ ನಿಲ್ದಾಣದಲ್ಲಿರುವ ಆಸ್ಟರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಐದಾರು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.