ಮುಂದಿನ ತಿಂಗಳು ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ನಡೆಯಲಿರುವ ಬೆಹತರ್‌ ಭಾರತ್‌ ಬುನಿಯಾದಿ ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಯುವ ಕಾಂಗ್ರೆಸ್‌ ನಿಯೋಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಶುಕ್ರವಾರ ಆಹ್ವಾನ ನೀಡಿದೆ.

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ಮುಂದಿನ ತಿಂಗಳು ನಡೆಯಲಿರುವ ಬೆಹತರ್‌ ಭಾರತ್‌ ಬುನಿಯಾದಿ ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಯುವ ಕಾಂಗ್ರೆಸ್‌ ನಿಯೋಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಶುಕ್ರವಾರ ಆಹ್ವಾನ ನೀಡಿದೆ. ಏಐಸಿಸಿ ಜಂಟಿ ಕಾರ್ಯದರ್ಶಿ ಯುವ ಕಾಂಗ್ರೆಸ್​ನ ಉತ್ಸವಾರಿ ಕೃಷ್ಣ ಅಳವಾರು, ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ಏಐಸಿಸಿ ಸದಸ್ಯರಾದ ಎಂ.ಎಸ್.‌ ರಕ್ಷಾ ರಾಮಯ್ಯ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

“ಬೆಹತರ್‌ ಭಾರತ್‌ ಬುನಿಯಾದಿ” ಸಮಾವೇಶವನ್ನು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಯುತ್ತಿದ್ದು, ಯುವ ಸಮೂಹದ ಮೂಲಕ ದೇಶದಲ್ಲಿ ಯುವ ಶಕ್ತಿಯನ್ನು ಸೂಕ್ತ ದಿಕ್ಕಿನತ್ತ ಕೊಂಡೊಯ್ಯುವ ಉದ್ದೇಶ ಹೊಂದಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಅತಿ ದೊಡ್ಡ ಯುವ ಸಮಾವೇಶ ಇದಾಗಿದ್ದು, ಮೂರು ದಿನಗಳ ಪಕ್ಷದ ಹಿರಿಯ ಮುಖಂಡರು, ತಜ್ಞರು ವಿವಿಧ ವಿಷಯಗಳ ಬಗ್ಗೆ ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ರಕ್ಷಾ ರಾಮಯ್ಯ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *