ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಭಕ್ತರು ಆಗಮಿಸದಂತೆ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಮುರುಘಾ ಮಠದಲ್ಲಿ ಶೂನ್ಯ ಪೀಠಾರೋಹಣ ನೆರವೇರಿಸಲಾಯಿತು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಮುರುಘರಾಜೇಂದ್ರ ಶರಣರು ಪೋಕ್ಸೋ ಪ್ರಕರಣದಡಿಯಲ್ಲಿ ಜೈಲು ಪಾಲಾಗಿರುವ ಹಿನ್ನೆಲೆಯಲ್ಲಿ ಮುರುಘಾ ಮಠಕ್ಕೆ ಪೀಠಾಧಿಪತಿಗಳು ಇಲ್ಲದೇ ಉಸ್ತುವಾರಿಗಳ ನೇತೃತ್ವದಲ್ಲಿ ಮಠದ ಆಡಳಿತವನ್ನು ನಡೆಸಲಾಗುತ್ತಿದೆ.

ಜೊತೆಗೆ, ಸರ್ಕಾರದಿಂದ ಆಡಳಿತಾಧಿಕಾರಿಯನ್ನು ನಿಯೋಜನೆ ಮಾಡಲಾಗಿದ್ದು, ಮಠದ ಶಿಕ್ಷಣ ಸಂಸ್ಥೆ ಮತ್ತು ವಸತಿ ನಿಲಯಗಳನ್ನು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಒಪ್ಪಿಸಿದ್ದಾರೆ.

ಇನ್ನು ಮಠದ ಮೇಲಿದ್ದ ಕೋಟ್ಯಂತರ ರೂ. ಹಣವನ್ನು ತೀರಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮಠದಲ್ಲಿ ಪೀಠಾಧಿಪತಿ ಇಲ್ಲದ ಹಿನ್ನೆಲೆಯಲ್ಲಿ ಮುರುಘಾಮಠದಲ್ಲಿ ಕೆಲವು ಶರಣರ ನೇತೃತ್ವದಲ್ಲಿ ಶೂನ್ಯ ಪೀಠಾರೋಹಣ ನೆರವೇರಿಸಲಾಯಿತು.

Leave a Reply

Your email address will not be published. Required fields are marked *