ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ದೇಶದಿಂದ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮ ವ್ಯಾಪ್ತಿಯಲ್ಲಿ ಹಾಲಪ್ಪ ಹಣಮಂತ ಶೇಗುಣಸಿ ಸೇರಿದಂತೆ ಇನ್ನಿತರರು ದುಡ್ಡು ಹಂಚುವ ಜತೆಗೆ ಆಮಿಷ ತೋರುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಬೆಳಗಾವಿ (ಮೇ 1, 2023): ಪ್ರಧಾನಿ ನರೇಂದ್ರ ಮೋದಿ ಅವರ ಬಹಿರಂಗ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆತರುವ ಉದ್ದೇಶದಿಂದ ಹಣ ಹಂಚಿಕೆ ಮಾಡಿದ ಆರೋಪದ ಮೇಲೆ ಸ್ಥಳೀಯ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ಪಿ. ರಾಜೀವ್‌ ಸೇರಿದಂತೆ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.

ಕುಡಚಿ ಮತಕ್ಷೇತ್ರದ ಕೋಳಿಗುಡ್ಡ ಸಮೀಪದಲ್ಲಿ ಶನಿವಾರ ಬಿಜೆಪಿ ಬಹಿರಂಗ ಸಮಾವೇಶವನ್ನು ಆಯೋಜಿಸಲಾಗಿತ್ತು. ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ದೇಶದಿಂದ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮ ವ್ಯಾಪ್ತಿಯಲ್ಲಿ ಹಾಲಪ್ಪ ಹಣಮಂತ ಶೇಗುಣಸಿ ಸೇರಿದಂತೆ ಇನ್ನಿತರರು ದುಡ್ಡು ಹಂಚುವ ಜತೆಗೆ ಆಮಿಷ ತೋರುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿಯನ್ನಾಗಿ ಶಾಸಕ ಪಿ. ರಾಜೀವ್‌ ಹಾಗೂ ಹಾಲಪ್ಪ ಶೇಗುಣಿಸಿ ವಿರುದ್ಧ ಹಾರೂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By admin

Leave a Reply

Your email address will not be published. Required fields are marked *