ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಳಿದುಕೊಂಡಿದ್ದ ಸರ್ಕಾರಿ ನಿವಾಸ ಸೆವೆನ್‌ ಮಿನಿಸ್ಟರ್ಸ್‌ ಕ್ವಾಟರ್ಸ್‌ ನಲ್ಲಿರುವ ಬಂಗಲೆ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣು ಬಿದ್ದಿದೆ. ಈಗಾಗಲೇ ಸರ್ಕಾರಿ ಬಂಗಲೆಯನ್ನು ಪರಿಶೀಲಿಸಿದ್ದಾರೆ, ಕೀ ಇಲ್ಲದ ಕಾರಣ ಹೊರಗಡೆ ಮಾತ್ರ ಪರಿಶೀಲನೆ ನಡೆಸದ್ದಾರೆ.

Ramesh Jarkiholi- Lakshmi hebbalkar

ಹೈಲೈಟ್ಸ್‌:

  • ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಳಿದುಕೊಂಡಿದ್ದ ಸರ್ಕಾರಿ ನಿವಾಸದ ಮೇಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣಿಟ್ಟಿದ್ದಾರೆ.
  • ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿರುವ ಸರ್ಕಾರಿ ಬಂಗಲೆಯಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಉಳಿದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
  • ಇದಕ್ಕೆ ಪೂರಕ ಎಂಬಂತೆ ಅವರು ಶುಕ್ರವಾರ ಬೆಳಗ್ಗೆ 11.30 ಗಂಟೆಗೆ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್ ಗೆ ಆಗಮಿಸಿ ಸರ್ಕಾರಿ ಬಂಗಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಿವಾಸದ ಕೀ ಇಲ್ಲದ ಕಾರಣದಿಂದ ಹೊರಗಡೆ ಮಾತ್ರ ಪರಿಶೀಲನೆ ನಡೆಸಿ ತೆರಳಿದ್ದಾರೆ.

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಳಿದುಕೊಂಡಿದ್ದ ಸರ್ಕಾರಿ ನಿವಾಸದ ಮೇಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣಿಟ್ಟಿದ್ದಾರೆ. ಹೌದು, ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿರುವ ಸರ್ಕಾರಿ ಬಂಗಲೆಯಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಉಳಿದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸ್ಯಾಂಕಿ ರಸ್ತೆಯಲ್ಲಿ ಇರುವ ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿ ಇರುವ ಬಲಭಾಗದ ನಾಲ್ಕನೇ ನಿವಾಸದಲ್ಲಿ ಈ ಹಿಂದೆ ರಮೇಶ್ ಜಾರಕಿಹೊಳಿ ಉಳಿದುಕೊಂಡಿದ್ದರು. ಸಮ್ಮಿಶ್ರ ಸರ್ಕಾರ ಪತನವಾಗುವ ಸಂದರ್ಭದಲ್ಲಿ ಇದೇ ಸರ್ಕಾರಿ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಿದ್ದರು.

ಸತೀಶ್‌ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರೆ, ಕಾಲ ಕೂಡಿ ಬರಬೇಕು: ಲಕ್ಷ್ಮೀ ಹೆಬ್ಬಾಳ್ಕರ್‌
ಆದರೆ ಇದೀಗ ನೂತನವಾಗಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇದೇ ಸರ್ಕಾರಿ ನಿವಾಸಕ್ಕೆ ತಮ್ಮ ವಾಸ್ತವ್ಯ ಬದಲಾವಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಪೂರಕ ಎಂಬಂತೆ ಅವರು ಶುಕ್ರವಾರ ಬೆಳಗ್ಗೆ 11.30 ಗಂಟೆಗೆ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್ ಗೆ ಆಗಮಿಸಿ ಸರ್ಕಾರಿ ಬಂಗಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಿವಾಸದ ಕೀ ಇಲ್ಲದ ಕಾರಣದಿಂದ ಹೊರಗಡೆ ಮಾತ್ರ ಪರಿಶೀಲನೆ ನಡೆಸಿ ತೆರಳಿದ್ದಾರೆ.

ಖಾತೆ, ಕೊಠಡಿ ಹಾಗೂ ಬಂಗಲೆ ಪಡೆದುಕೊಳ್ಳುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ಸಾಕಷ್ಟು ಸುದ್ದಿಯಾಗಿತ್ತು. ಡಿಕೆಶಿ ನಿರ್ವಹಣೆ ಮಾಡಿದ್ದ ಜಲಸಂಪನ್ಮೂಲ ಖಾತೆಯನ್ನು ಬೇಡಿಕೆ ಮೂಲಕ ರಮೇಶ್ ಜಾರಕಿಹೊಳಿ ಪಡೆದುಕೊಂಡಿದ್ದರು.

ಜಲ ಸಂಪನ್ಮೂಲ ಖಾತೆ ನನಗೆ ಬೇಕು, ಅದಿಲ್ಲದಿದ್ದರೆ ತಾವು ಸಚಿವರಾಗಿಯೇ ಮುಂದುವರೆಯುವುದರಲ್ಲಿ ಅರ್ಥವಿಲ್ಲ ಎಂದಿದ್ದರು ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು.

ಅಷ್ಟೇ ಅಲ್ಲದೆ ಡಿಕೆಶಿ ನಿವಾಸ ಇರುವ ಸದಾಶಿವ ನಗರದಲ್ಲಿ ರಮೇಶ್ ಜಾರಕಿಹೊಳಿ ಮನೆಯನ್ನು ನಿರ್ಮಾಣ ಮಾಡಿದ್ದು ಕೂಡಾ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸಿ.ಡಿ ವಿಚಾರವಾಗಿ ರಮೇಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು. ಹಲವು ಮಾಧ್ಯಮಗಳ ಸಂದರ್ಶನದ ಸಂದರ್ಭದಲ್ಲೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

Leave a Reply

Your email address will not be published. Required fields are marked *