ರಾಮನಗರ : ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ನಷ್ಟವಿಲ್ಲ. ಹೆಸರು ಬದಲಾವಣೆ ನಷ್ಟ ಇಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯ ಸಿಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಹೆಸರು ಮರುನಾಮಕರಣ ವಿಚಾರ ಸಂಬಂಧ ಮಾಗಡಿಯಲ್ಲಿ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾಧ್ಯಮದವರಿಗೆ ಪತ್ರಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮರುನಾಮಕರಣ ವಿಚಾರ ನನಗೆ ಗೊತ್ತಿಲ್ಲ. ನನಗೆ ವೈಯಕ್ತಿಕವಾಗಿ ಡಿ.ಕೆ.ಶಿವಕುಮಾರ್ ಸಿಕ್ಕಿಲ್ಲ.
ಚರ್ಚೆ ಮಾಡಿಲ್ಲ. ಆದರೆ ಹೆಸರು ಬದಲಾವಣೆಯಿಂದ ಯಾವುದೇ ತೊಂದರೆ ಇಲ್ಲ. ಹೆಸರು ಬದಲಾವಣೆ ಮಾಡಿದರೆ ಯಾವುದೇ ನಷ್ಟ ಇಲ್ಲ. ಜೊತೆಗೆ ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯಗಳು ಸಿಗಬೇಕು ಎಂದರು.