ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ‌ ಇದೆ. ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ. ಆ ಚುನಾವಣೆಗಳ ಬಗ್ಗೆ ನಾವು ತಯಾರಿ ಮಾಡಬೇಕು ಎಂದು ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ (Loksabha Election) ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ‌ ಇದೆ. ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ (Local Body Election) ನಡೆಯಲಿದೆ. ಆ ಚುನಾವಣೆಗಳ ಬಗ್ಗೆ ನಾವು ತಯಾರಿ ಮಾಡಬೇಕು. ಪಕ್ಷ ಉಳಿಯಬೇಕಾದರೇ ಏನು ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ಪಕ್ಷ ಸಂಘಟನೆ ಬಗ್ಗೆ ನಮ್ಮ ಮುಖಂಡರ ಜತೆ ಚರ್ಚೆ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ (HD Deve Gowda) ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್​.ಡಿ.ದೇವೇಗೌಡ ಅವರು ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಲೋಕಸಭೆ ಚುನಾವಣೆ ಬಗ್ಗೆ ಈಗಲೇ ಚರ್ಚೆ ಮಾಡಲು ಹೋಗಲ್ಲ. ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕಡೆ ಅಭ್ಯರ್ಥಿ ಹಾಕಬೇಕು. ಎಲ್ಲೆಲ್ಲಿ ಸ್ಪರ್ಧಿಸಬೇಕೆಂದು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇವೆ. ಲೋಕಸಭೆ ಚುನಾವಣೆಗೂ ಮುನ್ನ ಸ್ಥಳೀಯ ಚುನಾವಣೆಗೆ ತಯಾರಿ ನಡೆಸುತ್ತೇವೆ ಎಂದರು.

ನಾವು ಎರಡು ಬಾರಿ ಕಾಂಗ್ರೆಸ್​​ಗೆ ಬೆಂಬಲ ಕೊಟ್ಟಿದ್ದೇವೆ. ಮುಂದೆ ಪಕ್ಷ ಹೇಗೆ ಅಭಿವೃದ್ಧಿ ಮಾಡಬೇಕು, ಪಕ್ಷ ಉಳಿಬೇಕಾದರೇ ಏನ್ ಮಾಡಬೇಕು. ಎಲ್ಲದರ ಬಗ್ಗೆ ಮುಖಂಡರು ಚರ್ಚೆ ಮಾಡುತ್ತೇವೆ. ನಮ್ಮ ಶಕ್ತಿ ನಮ್ಮ ಕಾರ್ಯಕರ್ತರು. ಯುವಕರಿಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *