ಬೆಂಗಳೂರು;ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಕ್ರಿಯಿಸುವಾಗ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಾದ್ಯಮದ ಜೊತೆ ಮಾತನಾಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ,ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇ ಬೇಕು. ಜನ್ ಧನ್ ಅಕೌಂಟ್ ಓಪನ್ ಆಗಿದೆ. ಅದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರೂ ಗೃಹ ಲಕ್ಷ್ಮಿ ಜಾರಿ ಯಾಕೆ ಆಗುತ್ತಿಲ್ಲ. ಗೃಹ ಲಕ್ಷ್ಮಿ ಯೋಜನೆ ಮುಂದೂಡಲು ನೆಪ ಹೇಳಲಾಗುತ್ತಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಯಂತೆ 2000 ರೂ.ನೀಡಬೇಂದರೆ ಮನೆ ಯಜಮಾನಿ ಯಾರು ಅಂತಾ ತೀರ್ಮಾನ ಮಾಡಬೇಕಂತೆ? ಮನೆಯೊಳಗೆ ಅತ್ತೆ – ಸೊಸೆ ಕೂತು ಈ ತೀರ್ಮಾನ ಮಾಡಲು ಸಾಧ್ಯನಾ? ಹಿಂದೂಗಳ ಮನೆಯಲ್ಲಾದರೂ ಅತ್ತೆ – ಸೊಸೆ ನಡುವೆ ಯಜಮಾನಿಗೆ ಪೈಪೋಟಿ ಇರುತ್ತೆ. ಆದರೆ, ಸಾಬ್ರ ಮನೆಯಲ್ಲಿ ಎರಡು ಹೆಂಡ್ತಿ ಮೂರು ಹೆಂಡ್ತಿ ಇದ್ದಾರೆ. ಅವರಲ್ಲಿ ಯಾರು ಯಜಮಾನಿ ಆಗುತ್ತಾರೆ? ಅವರ ಮನೆಯೊಳಗೆ ಬೆಂಕಿ ಹಾಕುತ್ತಿದ್ದೀರಿ .ಕುಟುಂಬ ಒಡೆಯುವ ಕೆಲಸ ಆಗುತ್ತಿದೆ’ ಎಂದು ಹೇಳಿದ್ದಾರೆ.

ಕರ್ನಾಟಕಕ್ಕೆ ಶ್ರೀಲಂಕಾ, ಬಾಂಗ್ಲಾದೇಶದ ಸ್ಥಿತಿ ಬರುವ ಕಾಲ ದೂರವಿಲ್ಲ.ಕೇಜ್ರಿವಾಲ್ 2013ರಲ್ಲಿ ಕಳಪೆ ಫ್ರೀ ಯೋಜನೆ ತಂದಿದ್ದರು.ಈಗ ಅದನ್ನೆ ಕಾಂಗ್ರೆಸ್ ಸರಕಾರ ಮಾಡಿದೆ. ಕಾಂಗ್ರೆಸ್ ನ ಪ್ರಣಾಳಿಕೆ ಈಡೇರಿಸಲು ಕೇಂದ್ರ ಬಜೆಟ್ ಹಣ ತಂದರೂ ಆಗಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

6 ಕೆಜಿ ಅಕ್ಕಿಯನ್ನು ಕೇಂದ್ರ ಸರಕಾರ ಕೊಡುತ್ತಿದೆ. ಇದಕ್ಕೆ ನಾಲ್ಕು ಸೇರಿಸಿ 10 ಕೆಜಿ ಕೊಟ್ಟರೆ ಅದು ನಿಮ್ಮ ಗ್ಯಾರಂಟಿ ಹೇಗೆ ಆಗುತ್ತೆ? ಇದು ಮೋಸ ಅಲ್ವಾ? ಯುವ ನಿಧಿ ಹೆಸರಲ್ಲೂ ಸರಕಾರ ಜನರಿಗೆ ಮೋಸ ಮಾಡುತ್ತಿದೆ. ಮತಗಳ ಹಗಲು ದರೋಡೆ ಮಾಡಿ ಈಗ ಜನರಿಗೆ ಟೋಪಿ ಹಾಕುವ ಕೆಲಸ ಆಗುತ್ತಿದೆ. ಸುಭಿಕ್ಷ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಭಿಕ್ಷಾ ರಾಜ್ಯ ಮಾಡುತ್ತಿದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆವರೆಗೂ ಜನರನ್ನು ಗ್ಯಾರಂಟಿ ಜಾರಿ ಹೆಸರಿನಲ್ಲಿ ಮಂಗ್ಯಾ ಮಾಡುತ್ತಾರೆ. ಕಾಂಗ್ರೆಸ್ ನೀತಿಗಳಿಂದ ರಾಜ್ಯ ದಿವಾಳಿ ಆಗುತ್ತಿದೆ. ಸದ್ಯದಲೇ ಎಲ್ಲಾ ರೀತಿಯ ತೆರಿಗೆ ಹೆಚ್ಚು ಮಾಡುತ್ತಾರೆ. ಆಸ್ತಿ ನೋಂದಣಿ, ಮದ್ಯದ ತೆರಿಗೆ ಹೀಗೆ ಎಲ್ಲವೂ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ‌.

Leave a Reply

Your email address will not be published. Required fields are marked *