ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ ಬಂಧನ ಮಾಡುವುದು ಸರಿಯಾದ ಕ್ರಮ ಅಲ್ಲ. ನೂರಾರು ವರ್ಷಗಳಿಂದ ಇಂತಹ ವಸ್ತುಗಳ ಸಂಗ್ರಹ ಇದೆ. ಹಾಗೆ ಸಂಗ್ರಹಿಸಿಟ್ಟವರನ್ನೆಲ್ಲ ಬಂಧಿಸಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ವನ್ಯಜೀವಿ ರಕ್ಷಣಾ ಕಾಯ್ದೆ ಬರುವ ಮೊದಲು ಹುಲಿ ಉಗುರು, ವನ್ಯ ಪ್ರಾಣಿಗಳ ವಸ್ತುಗಳು ಮಲೆನಾಡು, ಕರಾವಳಿ ಭಾಗದಲ್ಲಿ ಅಲಂಕಾರಿಕ ವಸ್ತುವಾಗಿತ್ತು. ಮಕ್ಕಳಿಗೆ ಹುಲಿ ಉಗುರು ತೊಡಿಸುತ್ತಿದ್ದರು. ಏಕಾಏಕಿ ವ್ಯಕ್ತಿಗಳನ್ನು ಬಂಧನ ಮಾಡಿದರೆ ಜೈಲಿನಲ್ಲಿ ಸ್ಥಳ ಸಾಕಾಗುವುದಿಲ್ಲ ಎಂದರು.

ವನ್ಯಜೀವಿ ರಕ್ಷಣಾ ಕಾಯ್ದೆಗೆ ನಾನು ವಿರೋಧಿಯಲ್ಲ. ಆದರೆ ಹಿಂದಿನ ಕಾಲದಿಂದಲೂ ಮನೆಯಲ್ಲಿ ಹುಲಿ ಉಗುರು ಇಟ್ಟಿರುವವರನ್ನೆಲ್ಲ ಬಂಧಿಸುವುದು ಸರಿಯಲ್ಲ. ಈ ಬಗ್ಗೆ ಸರ್ಕಾರ ಚರ್ಚಿಸಬೇಕು ಎಂದು ಅರಗ ಜ್ಞಾನೇಂದ್ರ ಆಗ್ರಹಿಸಿದರು.

Leave a Reply

Your email address will not be published. Required fields are marked *