2023ರ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲಲು ವಿಫಲವಾದರೆ ಜೆಡಿಎಸ್ ವಿಸರ್ಜಿಸುವ ಭರವಸೆಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸಹಕಾರ ಸಚಿವ ಕೆ ಎನ್ ರಾಜಣ್ಣ ನೆನಪಿಸಿದ್ದಾರೆ.

KN_Rajanna1

ಹಾಸನ:  2023ರ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲಲು ವಿಫಲವಾದರೆ ಜೆಡಿಎಸ್ ವಿಸರ್ಜಿಸುವ ಭರವಸೆಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸಹಕಾರ ಸಚಿವ ಕೆ ಎನ್ ರಾಜಣ್ಣ ನೆನಪಿಸಿದ್ದಾರೆ.

ಭಾನುವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಜಣ್ಣ, ಕುಮಾರಸ್ವಾಮಿ ಅವರ ಮಾತಿನ ಮೇಲೆ ಹಿಡಿತವಿಲ್ಲ. ಕಾಂಗ್ರೆಸ್ ಜೊತೆ ಕೈ ಜೋಡಿಸಿ ಅಧಿಕಾರ ಅನುಭವಿಸಿದ್ದ ಅವರು ಈಗ ಬಿಜೆಪಿಯೊಂದಿಗೆ ಕೈ ಜೋಡಿಸುತ್ತಿದ್ದಾರೆ ಎಂದರು.

ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ  ರಾಜಣ್ಣನವರ ಕ್ಷೇತ್ರವಾದ ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಬೀಡುಬಿಟ್ಟಿದ್ದ ರಾಜಕೀಯ ಬೆಳವಣಿಗೆಗಳನ್ನು ನೆನಪಿಸಿಕೊಂಡ ಸಚಿವರು, ಗೌಡರಿಗೆ ಜನರು ಪ್ರಾಮುಖ್ಯತೆ ನೀಡಲಿಲ್ಲ. ಅರಸೀಕೆರೆಯಲ್ಲಿ ಕೆ.ಎಂ.ಶಿವಲಿಂಗೇಗೌಡರನ್ನು ಸೋಲಿಸಲು ಗೌಡರು ಮತ್ತು ಅವರ ಪುತ್ರರು ರಾಜಕೀಯ ತಂತ್ರಗಳನ್ನೂ ರೂಪಿಸಿದ್ದರು ಎಂದು ತಿಳಿಸಿದರು.

ಬಡವರು ಮತ್ತು ನಿರ್ಲಕ್ಷಿತ ಸಮುದಾಯಗಳಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಒತ್ತಾಯಿಸಿದ ರಾಜಣ್ಣ, ಹೆಚ್‌ಡಿಸಿಸಿ ಬ್ಯಾಂಕ್‌ನಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ತನಗೆ ತಿಳಿದಿದೆ ಮತ್ತು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇನೆ ಎಂದು  ಹೇಳಿದರು.

ಜಿಲ್ಲೆಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಿದ ಕಾಂಗ್ರೆಸ್ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರ ಒಂದು ವರ್ಗವು ರಾಜಣ್ಣ ಅವರನ್ನು ಒತ್ತಾಯಿಸಿದರು.

Leave a Reply

Your email address will not be published. Required fields are marked *

Latest News