ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದ್ದಾರೆ.
ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರಿ ಬಸ್ಸುಗಳಲ್ಲಿ ಬಿಪಿಎಲ್ ಕಾರ್ಡು ಇದ್ದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಿಸಬಹುದು ಎಂಬ ಷರತ್ತು ವಿಧಿಸಿಲ್ಲ. ಬಿಪಿಎಲ್-ಎಪಿಎಲ್ ಕಾರ್ಡು ಹೊಂದಿರುವ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಎಂದು ಅವರು ತಿಳಿಸಿದರು.