ಹುಟ್ಟೂರಿನಲ್ಲಿ ಡಾಲಿ ಧನಂಜಯ್ ಮದುವೆ ಸಂಭ್ರಮ-ಸಡಗರ
ಡಾಲಿ ಧನಂಜಯ್ ಇನ್ನುಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೇ ಫೆಬ್ರವರಿ 15 ಹಾಗೂ 16ರಂದು ಮೈಸೂರಿನಲ್ಲಿ ಅದ್ಧೂರಿಯಾಗಿ ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಹಿತೈಶಿಗಳ ಸಮ್ಮುಖದಲ್ಲಿ ಮದುವೆ ಆಗಲಿದ್ದಾರೆ. ಹೀಗಾಗಿ ಅವರ ಹುಟ್ಟೂರಾದ ಅರಸಿಕೆರೆಯಲ್ಲಿ ಕಾಳೇನ ಹಳ್ಳಿಯಲ್ಲಿ ಮದುವೆ ಸಮಾರಂಭಗಳು ನಡೆಯುತ್ತಿವೆ.…
ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಭೇಟಿಯಾದ ಮೋದಿ
ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ವಾಷಿಂಗ್ಟನ್ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾಗಿದ್ದಾರೆ. ತುಳಸಿ ಗಬ್ಬಾರ್ಡ್ ಅವರೊಂದಿಗಿನ ಭೇಟಿಯ ಫೋಟೊವನ್ನು ಹಂಚಿಕೊಂಡ ಪ್ರಧಾನಿ…
ಮೆಟ್ರೋ ಪ್ರಯಾಣ ದರ ಇಳಿಕೆಗೆ ಸಿಎಂ ಮಹತ್ವದ ಸೂಚನೆ
ಬೆಂಗಳೂರು : ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್ಗೆ ದುಪ್ಪಟ್ಟು ದರ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮೆಟ್ರೋ ಟಿಕೆಟ್ ದರ ಇಳಿಕೆ ಮಾಡುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ…
ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ; ಸಿಎಂ ಸಂತಾಪ
ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ ಎಂದು ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು.…
ಜಾನಪದ ಕೋಗಿಲೆ ‘ಪದ್ಮಶ್ರೀ’ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ನಿಧನ!
ಕಾರವಾರ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88)ಇಂದು ನಸುಕಿನ ಜಾವ ನಿಧನರಾಗಿದ್ದಾರೆ ಉತ್ತರ ಕನ್ನಡ ಜಿಲ್ಲೆಯ…
ಅತ್ಯಾಚಾರಕ್ಕೊಳಗಾದ ಹೆಣ್ಣಿಗೆ ಗರ್ಭಪಾತದ ಹಕ್ಕಿದೆ; ಅಲಹಾಬಾದ್ ಹೈಕೋರ್ಟ್ ತೀರ್ಪು
ಅಲಹಾಬಾದ್ : ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ, 17 ವರ್ಷದ ಬಾಲಕಿಗೆ ಮಗುವನ್ನು ಇಟ್ಟುಕೊಳ್ಳಬೇಕೆ ಅಥವಾ ಬೇಡವೇ ಎಂಬುದನ್ನು ಆಯ್ಕೆ ಮಾಡಲು ಅವಕಾಶ ನೀಡಿರುವ ಅಲಹಾಬಾದ್ ಹೈಕೋರ್ಟ್ ತಾನು ತಾಯಿಯಾಗಬೇಕೇ ಅಥವಾ ಗರ್ಭಪಾತ ಮಾಡಿಸಿಕೊಳ್ಳಬೇಕೇ ಎಂಬುದನ್ನು ನಿರ್ಧರಿಸಲು ಅವಕಾಶ ನೀಡಿದೆ. ನ್ಯಾಯಮೂರ್ತಿಗಳಾದ ಮಹೇಶ್…
Aero India 2025: ಇಂದು, ನಾಳೆ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ಅವಕಾಶ
ಬೆಂಗಳೂರು : ಯಲಂಹಕದಲ್ಲಿ ನಡೆಯುತ್ತಿರುವ ‘ಏರೋ ಇಂಡಿಯಾ 2025’ ಆಕರ್ಷಣೀಯವಾಗಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ಅವಕಾಶ ಸಿಕ್ಕಿದೆ. ಇಂದು ಮತ್ತು ನಾಳೆ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆಯಿದೆ. ಮೊದಲ ಮೂರು ದಿನ ಕೇವಲ ಅಡ್ವಾ ಪ್ರದೇಶಕ್ಕೆ…
ಭಾರತದ ಕ್ಷಿಪಣಿಗಳು ಗಡಿ ರಕ್ಷಣೆ ಮಾತ್ರವಲ್ಲ, ವಿಶ್ವದ ಆಕರ್ಷಣೆಯ ಕೇಂದ್ರ; ಸಚಿವ ರಾಜನಾಥ್ ಸಿಂಗ್
ಬೆಂಗಳೂರು : ಭಾರತವು ಕ್ರಾಂತಿಕಾರಿ ಬದಲಾವಣೆಯ ಹಂತದಲ್ಲಿ ಸಾಗುತ್ತಿದ್ದು, ದೇಶದ ಯುದ್ಧ ವಿಮಾನಗಳು, ಕ್ಷಿಪಣಿ ವ್ಯವಸ್ಥೆಗಳು, ನೌಕಾ ಪಡೆಯ ನೌಕೆಗಳು ನಮ್ಮ ಗಡಿಯನ್ನು ರಕ್ಷಿಸುವುದಲ್ಲದೆ, ಇಡೀ ವಿಶ್ವದ ಆಕರ್ಷಣೆಯ ಕೇಂದ್ರವಾಗುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ಏರೋ…
ಘಜ್ನಿಯಿಂದ ಧ್ವಂಸ; ಮತ್ತೆ ಪುನರ್ ಸೋಮನಾಥ ಜ್ಯೋತಿರ್ಲಿಂಗ ಪ್ರತಿಷ್ಠಾಪನೆ!
ಆರ್ಟ್ ಆಫ್ ಲಿವಿಂಗ್ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರು ಸಾವಿರಾರು ವರ್ಷಗಳ ಹಿಂದೆ ಘಜ್ನಿಯ ಮಹಮ್ಮದ್ ನಾಶಪಡಿಸಿದ ಸೋಮನಾಥ ಜ್ಯೋತಿರ್ಲಿಂಗದ ಪ್ರತಿಷ್ಠಾಪನೆಯನ್ನು ನೆರವೇರಿಸಲಿದ್ದಾರೆ. ಶತಮಾನದ ಆರಂಭದಲ್ಲಿ ಘಜ್ನಿ ಮಹಮ್ಮದ್ ಭಾರತದ ಮೇಲೆ ನಿರಂತರವಾಗಿ ಆಕ್ರಮಣ ಮಾಡುತ್ತಿದ್ದ. ಈ ವಿಶೇಷವಾಗಿ ದೇವಾಲಯಗಳು…
ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ – ಸಿಎಂ
ಬೆಂಗಳೂರು : ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ…