ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಿಆರ್ ಪಿಎಫ್ ಸಿಬ್ಬಂದಿಯನ್ನು ಒಳಗೊಂಡಿರುವ ʻಝೆಡ್ʼ ಶ್ರೇಣಿಯ ಭದ್ರತೆ ಕಲ್ಪಿಸಿ ಕೇಂದ್ರ ಗೃಹ ಸಚಿವಾಲಯ ಗುರುವಾರ ಆದೇಶಿಸಿದೆ.
ಯಡಿಯೂರಪ್ಪನವರಿಗೆ ಬೆದರಿಕೆ ಇರುವ ಕುರಿತು ಮಾಹಿತಿಯನ್ನು ಗುಪ್ತಚರ ಇಲಾಖೆ ಕೇಂದ್ರ ಗೃಹ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರ ಆಧಾರದ ಮೇಲೆ ಕೇಂದ್ರದ ಭದ್ರತೆ ಕಲ್ಪಿಸಲಾಗಿದೆ. ಕರ್ನಾಟಕದಲ್ಲಿ ಮೂಲಭೂತವಾದಿಗಳಿಂದ ಯಡಿಯೂರಪ್ಪ ಬೆದರಿಕೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಸಂಚರಿಸುವ ಎಲ್ಲೆಡೆಯೂ ಸಿಆರ್ ಪಿಎಫ್ ಕಮಾಂಡೋಗಳು ಭದ್ರತೆ ಒದಗಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸರ್ಕಾರದ ವೈಪಲ್ಯಗಳನ್ನು ಬಹಿರಂಗಗೊಳಿಸುವುದಕ್ಕೆ ರಾಜ್ಯಾದಾದ್ಯಂತ ಸಂಚಾರ ಮಾಡಲಾಗುವುದು ಎಂದು ಬಿಎಸ್ವೈ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.