ಹುಬ್ಬಳ್ಳಿ: ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಹುಬ್ಬಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಮಾರುತಿ ಆಲ್ಟೋ ಕಾರು ಇಂದಿರಾ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವನ ತಲೆಗೆ ಗಂಭೀರ ಗಾಯವಾಗಿದೆ.
ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ ಗಾಯಾಳುವಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.