ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪ್ರದೀಪ್ (40) ಎಂದು ಗುರುತಿಸಲಾಗಿದೆ.
ಉತ್ತರಪ್ರದೇಶ ಮೂಲದ ಮೃತ ಪ್ರದೀಪ್ ಮಾರಸಂದ್ರ ಬಳಿಯ ಜಿಮ್ವೊಂದರಲ್ಲಿ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇಂದು ಬೆಳಗಿನಜಾವ 1-30 ರ ಸಮಯದಲ್ಲಿ ಯಲಹಂಕ – ದೊಡ್ಡಬಳ್ಳಾಪುರ ರಸ್ತೆಯಲ್ಲಿ ಸೆಂಚುರಿ ಇಡನ್ ಮುಂದೆ ಹೊಸಹುಡ್ಯಾ ಗೇಟ್ ಬಳಿ ಬುಲೆಟ್ ಬೈಕ್ ಮತ್ತು ಲಾನ್ಸರ್ ಕಾರ್ ಮದ್ಯೆ ಅಪಘಾತ ಸಂಭವಿಸಿದೆ. ಹಿಂಬದಿಯ ಸವಾರ ರೋಹಿತ್ ಠಾಕೂರ್ (28) ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ನಗರದ ಸಾರ್ವಜನಿಕ ಆಸ್ಫತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.