ಮದ್ಯ ಮಾರಾಟದಲ್ಲಿ ಅಕ್ರಮ ಹಣದ ವಹಿವಾಟು ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕರೆದಿದ್ದ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನೋಟಿಸ್ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.

ದೆಹಲಿ ಮದ್ಯ ಮಾರಾಟ ನಿಯಮ ಅವ್ಯವಹಾರ ಕುರಿತು ಜಾರಿ ನಿರ್ದೇಶನಾಲಯ ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು.

ನೋಟಿಸ್ ಪ್ರಕಾರ ಅರವಿಂದ್ ಕೇಜ್ರಿವಾಲ್ ಗುರುವಾರ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ತಮಗೆ ಅನಗತ್ಯವಾಗಿ ರಾಜಕೀಯ ಉದ್ದೇಶಗಳಿಗೆ ನೀಡಿದ ನೋಟಿಸ್ ಅನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಲು ಅರವಿಂದ್ ಕೇಜ್ರಿವಾಲ್, ಇಂದು ಮಧ್ಯಪ್ರದೇಶಕ್ಕೆ ತೆರಳಲಿದ್ದಾರೆ.

Leave a Reply

Your email address will not be published. Required fields are marked *