ಬಾರ್​ನಲ್ಲಿ ಕೂತು ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಯುವಕನನ್ನು ಚಾಕುವಿನಿಂದ ಇರಿದ ಕೊಲೆ ಮಾಡಿದ್ದಾರೆ.

Bengaluru News: ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಸ್ನೇಹಿತರಿಂದಲೇ ಯುವಕನ ಕೊಲೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಸ್ನೇಹಿತರೇ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಭೀಕರ ಘಟನೆ ನಗರದ ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ನಡೆದಿದೆ(Murder). ಡೇವಿಡ್(20) ಕೊಲೆಯಾದ ಯುವಕ. ನೇಪಾಳ ಮೂಲದವನಾಗಿದ್ದ ಡೇವಿಡ್, ಅಡುಗೆ ಕೆಲಸ ಮಾಡುತ್ತಿದ್ದ. ಜೂನ್ 24ರ ಸಂಜೆ ಸ್ನೇಹಿತರೊಂದಿಗೆ ಬಾರ್​​​​ನಲ್ಲಿ ಪಾರ್ಟಿ ಮಾಡಿದ್ದ ಡೇವಿಡ್, ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾನೆ.

ಬಳಿಕ ಮನೆಗೆ ತೆರಳುತ್ತಿದ್ದ ವೇಳೆ ಸ್ನೇಹಿತರು ಡೇವಿಡ್ ಮೇಲೆ ದಾಳಿ ನಡೆಸಿ ಮನ ಬಂದಂತೆ ಚಾಕುವಿನಿಂದ ಇರಿದು, ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವಕ್ಕೊಳಗಾದ ಡೇವಿಡ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲೆ ಆರೋಪಿಗಳು ಹಾಗೂ ಮೃತ ಡೇವಿಡ್ ನೇಪಾಳದ ನಿವಾಸಿಗಳಾಗಿದ್ದು ಅಕ್ಕ-ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದರು. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ಬೆಳ್ಳಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

Leave a Reply

Your email address will not be published. Required fields are marked *