ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ.

ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದೆ. ಮಂಗಳವಾರದಿಂದಲೇ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ಕಳೆದ 3 ತಿಂಗಳಿಂದ ಆಹಾರ ಇಲಾಖೆ ವೆಬ್​ಸೈಟ್​ ಕ್ಲೋಸ್ ಮಾಡಲಾಗಿತ್ತು. ರಾಷ್ಟ್ರೀಯ ಆಹಾರ ಹಕ್ಕು ಕಾಯ್ದೆಯ ಪ್ರಕಾರ ಮಿತಿ ಮೀರಿದ್ದರಿಂದ ವೆಬ್​ಸೈಟ್ ಮುಚ್ಚಲಾಗಿತ್ತು.

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ. ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಮಾನದಂಡ ನಿಗದಿಪಡಿಸಲಿದೆ.

ಈ ಮಧ್ಯೆ, ಜುಲೈ ತಿಂಗಳಿಂದ ‘ಅನ್ನಭಾಗ್ಯ’ ಯೋಜನೆಯಡಿ ಪಡಿತರ ಧಾನ್ಯ ವಿತರಣೆ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಸ್ತುತ 1.26 ಕೋಟಿ ಬಿಪಿಎಲ್​ ಕಾರ್ಡ್​ದಾರರಿದ್ದು, 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

‘ಅನ್ನಭಾಗ್ಯ’ ಯೋಜನೆ ಜಾರಿಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೆಲ್ಲದರ ನಡುವೆ ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಇನ್ನಷ್ಟೇ ಬಿಪಿಎಲ್ ಕಾರ್ಡ್ ನೀಡಬೇಕಿದೆ.

ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಕೂಡ ಒಂದಾಗಿದ್ದು, ಇದರ ಅನುಷ್ಠಾನಕ್ಕೆ ಬಿಪಿಎಲ್​ ಕಾರ್ಡ್ ಬಹುಮುಖ್ಯವಾಗಿದೆ. ಬಿಪಿಎಲ್ ಕಾರ್ಡ್​​ದಾರರು ಯೋಜನೆಯ ಫಲಾನುಭವಿಗಳಾಗಿದ್ದಾರೆ.

Leave a Reply

Your email address will not be published. Required fields are marked *