Karnataka Kannada News Today Live Updates: ಕರ್ನಾಟಕದಲ್ಲಿನ ರಾಜಕೀಯ, ಹವಾಮಾನ, ಅಪರಾಧ ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಕುರಿತಾದ ಲೇಟೆಸ್ಟ್​​ ಅಪ್​ಡೇಟ್ಸ್ ಇಲ್ಲಿದೆ.

Breaking Kannada News Live: ಚಂಡಮಾರುತ ಆರ್ಭಟ; ರಾಜ್ಯದಲ್ಲಿ ಮುಂದಿನ 3-4 ದಿನ ಭಾರಿ ಮಳೆ ಸಾಧ್ಯತೆ

ಮಳೆ

LIVE NEWS & UPDATES

  • 09 Jun 2023 10:31 AM (IST)Karnataka Breaking News Live: ಜಾಗದ ವಿಚಾರವಾಗಿ ಗಲಾಟೆ, ಕಾಂಗ್ರೆಸ್​ ಮುಖಂಡನಿಂದ ಹಲ್ಲೆ ಆರೋಪವಿಜಯಪುರ: ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿಕೊಂಡವರ ಮೇಲೆ ಕಾಂಗ್ರೆಸ್​ ಮುಖಂಡ ಬಾಪುಗೌಡ ಪಾಟೀಲ್ ಹಾಗೂ ಬೆಂಬಲಿಗರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಘಟನೆ ನಡೆದಿದೆ.
  • 09 Jun 2023 09:49 AM (IST)Karnataka Breaking News Live: ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಗೃಹ ಲಕ್ಷ್ಮಿ ಯೋಜನೆ ಲಾಂಚ್ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಮೊಟ್ಟಮೊದಲ ಯೋಜನೆಯಾಗಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ನೀಡುವ ‘ಶಕ್ತಿ’ ಈ ರೀತಿ ಉದ್ಘಾಟನೆಗೊಳ್ಳಲಿದೆ. ಇದೇ ಭಾನುವಾರ (ಜೂ.11) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್‌ನಿಂದ ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ.43 ಬಸ್‌ನಲ್ಲಿ ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಈ ಮಹಾತ್ವಾಕಾಂಕ್ಷಿ ಯೋಜನೆಗೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಲಿದ್ದಾರೆ.
  • 09 Jun 2023 09:42 AM
  • (IST)Karnataka Breaking News Live: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆಬೆಂಗಳೂರು: ಬಿಪರ್​ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ. ಇನ್ನು ರಾಜ್ಯ ರಾಜಕೀಯದಲ್ಲಂತೂ ಗೋಹತ್ಯ ನಿಷೇಧ, ಸರ್ಕಾರದ 5 ಗ್ಯಾರೆಂಟಿ ಯೋಜನಗಳ ಜಾರಿ ಮತ್ತು ಪಠ್ಯ ಪುಸ್ತಕ್ತ ಮರು ಪರೀಷ್ಕರಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿವೆ. ರಾಜ್ಯದಲ್ಲಿ ಭೀಕರ ಅಪಘಾತ, ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಇವುಗಳಲ್ಲದೆ ಇನ್ನು ಅನೇಕ ಬೆಳವಣಿಗೆಗಳು ನಡೆಯುತ್ತಿದ್ದು, ಇವಲ್ಲೆದರ ಕುರಿತಾದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ…

Leave a Reply

Your email address will not be published. Required fields are marked *