Karnataka Kannada News Today Live Updates: ಕರ್ನಾಟಕದಲ್ಲಿನ ರಾಜಕೀಯ, ಹವಾಮಾನ, ಅಪರಾಧ ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಕುರಿತಾದ ಲೇಟೆಸ್ಟ್​​ ಅಪ್​ಡೇಟ್ಸ್ ಇಲ್ಲಿದೆ.

Breaking Kannada News Live: ಬೆಂಗಳೂರಲ್ಲಿ ಜೂ9ರಿಂದ 11ರವರೆಗೆ ಪವರ್​ ಕಟ್​​

ಸಾಂದರ್ಭಿಕ ಚಿತ್ರ

LIVE NEWS & UPDATES

  • 09 Jun 2023 01:00 PM (IST)Breaking Kannada News Live: ವೀಕೆಂಡ್ ಶಾಕ್, ಜೂ9ರಿಂದ 11ರವರೆಗೆ ಪವರ್​ ಕಟ್​​ಬೆಂಗಳೂರು: ಜೂನ್ 9ರಿಂದ 11ರ ವರೆಗೆ 3 ದಿನಗಳ ಕಾಲ ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ತಿಳಿಸಿದೆ. ಇನ್ನು ಜೂನ್ 9ರಿಂದ ಜೂ.11ರ ವರೆಗೆ ಯಾವೆಲ್ಲ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎನ್ನುವ ವಿವರ ಈ ಕೆಳಗಿನಂತಿದೆ.ಜೂ9ರಿಂದ 11ರವರೆಗೆ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲೆ?
  • 09 Jun 2023 11:31 AM (IST)Breaking Kannada News Live: ಆಸ್ತಿ ವಿವರ ಸಲ್ಲಿಸುವಂತೆ ಕರ್ನಾಟಕದ 224 ಶಾಸಕರಿಗೂ ಡೆಡ್​​ಲೈನ್ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಡೆಡ್​ಲೈನ್ ನೀಡಿದ್ದಾರೆ.
  • 09 Jun 2023 11:23 AM (IST)Breaking Kannada News Live: ಬೆಂಗಳೂರಿನ ಭಾರತ್ ಇನ್​ಫ್ರಾ ಕಂಪನಿ ಮೇಲೆ ಇಡಿ ರೇಡ್ಬೆಂಗಳೂರು: ಭಾರತ್ ಇನ್​ಫ್ರಾ ಎಕ್ಸ್​ಪೋರ್ಟ್ಸ್ ಅಂಡ್ ಇಂಪೋರ್ಟ್ಸ್ ಸಂಸ್ಥೆಯ  ಬೆಂಗಳೂರು ಹಾಗೂ ದಾವಣಗೆರೆ ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 113.38 ಕೋಟಿ ರೂ ಸಾಲ ಬಾಕಿ ಉಳಿಸಿಕೊಂಡ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ಕೊಟ್ಟ ಆರೋಪ ಭಾರತ್ ಇನ್​ಫ್ರಾ ಮೇಲಿದೆ. ಈ ಪ್ರಕರಣದ ಮೇಲೆ ಇಡಿ ಅಧಿಕಾರಿಗಳ ತಂಡಗಳು ಜೂನ್ 5ರಂದು ರೇಡ್ ನಡೆಸಿರುವುದು ತಿಳಿದುಬಂದಿದೆ. ಜೂನ್ 7ರಂದು ಇಡಿ ಈ ರೇಡ್ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.
  • 09 Jun 2023 10:31 AM (IST)Breaking Kannada News Live: ಕುಸಿಯುವ ಹಂತ ತಲುಪಿದ ಭದ್ರಾ ಜಲಾಶಯದ ಬಲದಂಡೆ ನಾಲೆಯ ತಡೆಗೋಡೆಚಿಕ್ಕಮಗಳೂರು: ಲಕ್ಕವಳ್ಳಿಯ ಭದ್ರಾ ಜಲಾಶಯದ ಬಲದಂಡೆ ನಾಲೆಯ ತಡೆಗೋಡೆ ಕುಸಿಯುವ ಹಂತ ತಲುಪಿದೆ. ತರೀಕೆರೆ ತಾಲೂಕಿನ ಬರಗೇನಹಳ್ಳಿ ಗ್ರಾಮದ ಬಳಿ ಸುಮಾರು 5 ಕಿಮೀವರೆಗೂ ನಾಲೆಯ ತಡೆಗೋಡೆ ಕುಸಿಯುವ ಹಂತಕ್ಕೆ ತಲುಪಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
  • 09 Jun 2023 09:49 AM (IST)Karnataka Breaking News Live: ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಗೃಹ ಲಕ್ಷ್ಮಿ ಯೋಜನೆ ಲಾಂಚ್ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಮೊಟ್ಟಮೊದಲ ಯೋಜನೆಯಾಗಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ನೀಡುವ ‘ಶಕ್ತಿ’ ಈ ರೀತಿ ಉದ್ಘಾಟನೆಗೊಳ್ಳಲಿದೆ. ಇದೇ ಭಾನುವಾರ (ಜೂ.11) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್‌ನಿಂದ ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ.43 ಬಸ್‌ನಲ್ಲಿ ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಈ ಮಹಾತ್ವಾಕಾಂಕ್ಷಿ ಯೋಜನೆಗೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಲಿದ್ದಾರೆ.
  • 09 Jun 2023 09:42 AM (IST)Karnataka Breaking News Live: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆಬೆಂಗಳೂರು: ಬಿಪರ್​ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ. ಇನ್ನು ರಾಜ್ಯ ರಾಜಕೀಯದಲ್ಲಂತೂ ಗೋಹತ್ಯ ನಿಷೇಧ, ಸರ್ಕಾರದ 5 ಗ್ಯಾರೆಂಟಿ ಯೋಜನಗಳ ಜಾರಿ ಮತ್ತು ಪಠ್ಯ ಪುಸ್ತಕ್ತ ಮರು ಪರೀಷ್ಕರಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿವೆ. ರಾಜ್ಯದಲ್ಲಿ ಭೀಕರ ಅಪಘಾತ, ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ.

Leave a Reply

Your email address will not be published. Required fields are marked *