ಜನಪರ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಎರಡು ದಿನ ಕಾದು ಪ್ರಧಾನಿ ಭೇಟಿ ಮಾಡಬೇಕು.  ಆಗ ನಿಮಗೆ ಸಮಯ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡಿದರೆ ನಿಮ್ಮನ್ನು ಯಾರೂ ಹತ್ತಿರಕ್ಕೆ ಸೇರಿಸುವುದಿಲ್ಲ. ಭೇಟಿಗೆ ಅವಕಾಶ ಕೊಡುತ್ತಿಲ್ಲ ಅಂತ ಆರೋಪಿಸುವ ಬದಲು ದೆಹಲಿ ಹೋಗಿ ಎರಡು ದಿನ ಕಾದರೆ ಸಮಯ ಕೊಡುತ್ತಾರೆ ಎಂದರು.

ಗಂಡ ಹೆಂಡತಿ ಜಗಳದ ನಡುವೆ ಕೂಸು ಬಡವಾಯಿತು ಎಂಬ ಹಾಗೆ ನಿಮ್ಮ ಬೇಜವಾಬ್ದಾರಿ ಮಾತಿನಿಂದ ರಾಜ್ಯದ ಜನರಿಗೆ ತೊಂದರೆ ಆಗುತ್ತಿದೆ.  ಆದ್ದರಿಂದ ಈ ರೀತಿ ಮಾತನಾಡೋದು ಬಿಟ್ಟು ಮೋದಿ ಭೇಟಿ ಮಾಡಿ ಎಂದು ಯಡಿಯೂರಪ್ಪ ಸಲಹೆ ನೀಡಿದರು.

ವೇಣುಗೋಪಾಲ, ಸುರ್ಜೆವಾಲಾ ರಾಜ್ಯಕ್ಕೆ ಭೇಟಿ ಮಾಡಿರುವುದು ವಸೂಲು ಮಾಡಲು ಗುರಿ ನಿಗದಿಪಡಿಸಲು ಎಂಬುದು ಎಲ್ಲರಿಗೂ ಗೊತ್ತಾಗಿದೆ. ಕಾಂಗ್ರೆಸ್ ನವರು ಈಗ ನಾಯಿ-ನರಿಗಳಂತೆ ಕಚ್ಚಾಡುತ್ತಿದ್ದಾರೆ. ಇದನ್ನು ನೋಡಿದರೆ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ತಿಳಿಯುತ್ತದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *