ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ `ಶಕ್ತಿ ಯೋಜನೆ’ಗೆ ಇಂದು( ಜೂನ್ 11) ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ಸಿಕ್ಕಿದೆ. BTMC ಬಸ್ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫಸ್ಟ್ ಟಿಕೆಟ್ ಕೊಟ್ಟಿದ್ಯಾರಿಗೆ? ವಿಡಿಯೋ ನೋಡಿ
ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ `ಶಕ್ತಿ ಯೋಜನೆ’ಗೆ ಇಂದು( ಜೂನ್ 11) ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ಸಿಕ್ಕಿದೆ. ಸಿದ್ದರಾಮಯ್ಯ ಅವರು ವಿಧಾನಸಭೆ ಮುಂಭಾಗ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕೆಲ ಸಚಿವರು, ಶಾಸಕರು ಹಾಗು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಯ ಅಧಿಕಾರಿಗಳು ಬಸ್ನಲ್ಲೇ ವಿಧಾನಸಭೆಯಿಂದ ಮೆಜೆಸ್ಟಿಕ್ಗೆ ಪ್ರಯಾಣಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಫ್ರೀ ಬಸ್ ಟಿಕೆಟ್ ಅನ್ನು ಮೊದಲಿಗೆ ಸರ್ಕಾರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ವಿತರಿಸಿದರು.