ಕೇರಳದಲ್ಲಿ ನಡೆದ ತ್ರಿವಳಿ ಬಾಂಬ್ ಸ್ಫೋಟ ಪ್ರಕರಣದ ನಂತರ ಕಂಡು ಬಂದ ಪೋಸ್ಟರ್ ಹಂಚಿಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಕೇರಳ ಮುಖ್ಯುಮಂತ್ರಿ ಪಿಣರಾಯ್ ವಿಜಯನ್ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಚ್ಚಿಯಲ್ಲಿ ನಡೆದ ತ್ರಿವಳಿ ಪ್ರಕರಣದ ಹಿಂದೆ ಹಮಾಸ್ ಉಗ್ರರ ಕೈವಾಡವಿದೆ ಎಂದು ರಾಜೀವ್ ಚಂದ್ರಶೇಖರ್ ಸಾಮಾಜಿಕ ಜಾಲತಾಣದಲ್ಲಿ ಆರೋಪ ಮಾಡಿದ್ದರು. ಇದರಿಂದ ರಾಜ್ಯದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕೇರಳದ ಕಲಮಸ್ಸೆರಿಯಲ್ಲಿ ನಡೆದ ತ್ರಿವಳಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೂವರು ಮೃತಪಟ್ಟಿದ್ದು, 52ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಕರಣದ ಕುರಿತು ರಾಜೀವ್ ಚಂದ್ರಶೇಖರ್ ಮತ್ತು ಸಿಎಂ ವಿಜಯನ್ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿದ್ದವು.