ಕೌಶಲಾಭಿವೃದ್ಧಿ ಇಲಾಖೆಯಲ್ಲಿ ಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆಂಧ್ರಪ್ರದೇಶ ಹೈಕೋರ್ಟ್ ಮಂಗಳವಾರ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ 4 ವಾರಗಳ ಜಾಮೀನು ನೀಡುವ ಮೂಲಕ ರಿಲೀಫ್ ನೀಡಿದೆ.
ಚಂದ್ರಬಾಬು ನಾಯ್ಡು ಅವರ ಆರೋಗ್ಯದ ಬಗ್ಗೆ ರಾಜಮಹೇಂದ್ರವರ್ಮಾ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶದಲ್ಲಿ ರಿಲೀಫ್ ನೀಡಿದೆ.
ಮಾಜಿ ಸಿಎಂ ಪತ್ನಿ ಭುವನೇಶ್ವರಿ, ಪುತ್ರ ಲೋಕೇಶ್, ಸೊಸೆ ಬ್ರಾಹ್ಮಣಿ, ಚಂದ್ರಬಾಬು ನಾಯ್ಡು ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು.