ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಸ್ಪಷ್ಟ ಆರೋಪಪಟ್ಟಿ ಸಲ್ಲಿಸಿದ್ದು, ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪೋಲಿಸ್ ಆಯುಕ್ತರಾದ ದಯಾನಂದ, ಹೈದರಾಬಾದ್‌ನಲ್ಲಿರುವ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯದಿಂದ (ಸಿಎಫ್‌ಎಸ್‌ಎಲ್) ಕೆಲವು ವರದಿಗಳು ಬಾಕಿಯಿದ್ದು, ಅದನ್ನು ಕಾಲಮಿತಿಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು. ಬೆಂಗಳೂರಿನಲ್ಲಿರುವ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಿಂದ (ಎಫ್‌ಎಸ್‌ಎಲ್) ಎಲ್ಲಾ ವರದಿಗಳನ್ನು ಸ್ವೀಕರಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. “ಕೆಲವು ಎಲೆಕ್ಟ್ರಾನಿಕ್ ಸಾಧನಗಳನ್ನು CFSL ಗೆ ಕಳುಹಿಸಲಾಗಿದೆ – ಸಂಪೂರ್ಣ ವರದಿಗಳನ್ನು ಇನ್ನೂ ಸ್ವೀಕರಿಸಬೇಕಾಗಿದೆ. ಕೈಯಲ್ಲಿರುವ ವರದಿಗಳ ಆಧಾರದ ಮೇಲೆ ಆರೋಪಪಟ್ಟಿ ಸಲ್ಲಿಸಲಾಗಿದೆ.
ಪ್ರಕರಣವನ್ನು ತ್ವರಿತ ನ್ಯಾಯಾಲಯಕ್ಕೆ ಶಿಫಾರಸು ಮಾಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಆಯುಕ್ತರು, ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಲಾಗುವುದು ಎಂದರು. “ಕೆಲವು ಸಾಕ್ಷಿಗಳಲ್ಲಿ ತಹಶೀಲ್ದಾರ್‌ಗಳು, ವೈದ್ಯರು ಮತ್ತು ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿಗಳು ಸೇರಿದ್ದಾರೆ” ಎಂದು ಬಿ.ದಯಾನಂದ ಅವರು ತಿಳಿಸಿದ್ದಾರೆ.