ಹುಬ್ಬಳ್ಳಿ: ರಾಜ್ಯದಲ್ಲಿ ವಿರೋಧ ಪಕ್ಷ ವಿರೋಧಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿ, ನಿರುದ್ಯೋಗ, ಅತಿವೃಷ್ಟಿ ಅನಾವೃಷ್ಟಿ ಬಗ್ಗೆ ಮಾತನಾಡದೇ ಬಿಜೆಪಿಯವರು ಬೇರೆಯದೇ ಕೆಲಸ ಮಾಡುತ್ತಿದ್ದಾರೆ. ಇನ್ನೂ ಕೆಲವು ದಿನಕ್ಕೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಗ್ಗೆ ಮಾತನಾಡುತ್ತಾರೆ. ನೀವು ಏನು ಮಾಡಿ ಬಂದಿದ್ದೀರಾ ನಿಮ್ಮ ಅಧಿಕಾರದ ಅವಧಿಯಲ್ಲಿ..? ನಿಮ್ಮ ಮನವ ಸಂತೈಸಿಕೊಳ್ಳಿ ಎಂದು ಲೇವಡಿ ಮಾಡಿದರು.

ಮುಡಾ ಹಗರಣವನ್ನು ಎನ್ಕ್ವೇರಿ ಕಮೀಷನ್ ಗೆ ಆದೇಶ ಮಾಡಲಾಗಿದೆ. ಈಗ ಪ್ರಕರಣ ಕೋರ್ಟ್ ನಲ್ಲಿದೆ ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೇ ಕೋರ್ಟ್ ಮುಂದಿಡಿ. ಕೋರ್ಟ್ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೇ ಕಾಂಗ್ರೆಸ್ ಟೀಕೆ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ ಎಂದು ಅವರು ಹೇಳಿದರು.

ರಾಜ್ಯದ 27 ಎಂಪಿಗಳು ಗಂಡಸರೋ ಹೆಂಗಸರೋ ಅರ್ಥವಾಗುತ್ತಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಂದೆ ಬಾಯಿ ಬಿಟ್ಟು ಮಾತನಾಡುವ ಧೈರ್ಯ ಇಲ್ಲದವರು ರಾಜ್ಯದ ಅಭಿವೃದ್ಧಿ ಬಗ್ಗೆ ಏನು‌ ಮಾಡಲು ಸಾಧ್ಯ. ಬಿಜೆಪಿ ಹಾಗೂ ಕಾಂಗ್ರೆಸ್ ನವರು ಒಟ್ಟು ಗೂಡಿ ಚಳುವಳಿ ಮಾಡಿ ನಮ್ಮ‌ ರಾಜ್ಯದ ಹಕ್ಕು ನಮಗೆ ಕೊಡಿ ಎಂದು ಹೋರಾಟ ಮಾಡಿ ಎಂದು ಸವಾಲು ಹಾಕಿದರು.

ಇನ್ನೂ ಸಿಎಂ ಸಿದ್ಧರಾಮಯ್ಯನವರು ನೈತಿಕತೆಯಿಂದ ರಾಜಿನಾಮೆ ಕೊಡಬೇಕು ಎಂಬ ಬಿಜೆಪಿಗರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ಧರಾಮಯ್ಯನವರು ಯಾಕೆ ರಾಜಿನಾಮೆ ಕೊಡಬೇಕು. ಎಲ್ಲಿದೆ ನೈತಿಕ ಹೊಣೆ ಭೂತಾನ್ ನಲ್ಲಿ ಆರ್ಮಿದವರು 40 ಜನ ಸತ್ತರು ಮೋದಿಯವರು ನೈತಿಕತೆಯಿಂದ ರಾಜೀನಾಮೆ ನೀಡಿದ್ದಾರೆಯೇ..? ಅದೆಷ್ಟೋ ರೈಲು ಅಪಘಾತಗಳಾಗಿವೆ. ಸುಮಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕೇಂದ್ರದ ಬಿಜೆಪಿ ನಾಯಕರು ನೈತಿಕತೆಯಿಂದ‌ ರಾಜೀನಾಮೆ ಕೊಟ್ಟಿದ್ದಾರೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Latest News