ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನವಂಬರ್ ತಿಂಗಳಲ್ಲಿ ನಡೆಯುವ ದೇವರಾಜ ಅರಸು ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲು 24 ಸಮುದಾಯದ ಮುಖಂಡರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ನವೆಂಬರ್ ತಿಂಗಳಲ್ಲಿ ನಡೆಯುವ ದೇವರಾಜ ಅರಸು ಜಯಂತಿಯನ್ನು ದೇವರಾಜ ಅರಸು ಅವರ ಭಾವಚಿತ್ರದೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ವಿಜೃಂಭಣೆಯಿಂದ ಮೆರವಣಿಗೆ ಮಾಡಿ, ನಂತರ ವೇದಿಕೆ ಕಾರ್ಯಕ್ರಮದಲ್ಲಿ ಈ ವರ್ಷ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಾಲ್ಕು ಜನ ಸಾಧಕರಿಗೆ ಸನ್ಮಾನ, ತಾಲೂಕು ಮಟ್ಟದಲ್ಲಿ ಒಬ್ಬರಿಗೆ ಅರಸು ಪ್ರಶಸ್ತಿ ನೀಡಲು ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಸಭೆಗೆ ತಾಲೂಕಿನ 24 ಸಮುದಾಯದ ಪ್ರಮುಖ ನಾಯಕರುಗಳು ಭಾಗವಹಿಸಿ,ಚರ್ಚಿಸಿ, ಜಾತ್ಯತೀತವಾಗಿ ದೇವರಾಜ ಅರಸು ಜಯಂತಿಯನ್ನು ಆಚರಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ ಸಾಮೂಹಿಕ ನಾಯಕತ್ವದಲ್ಲಿ ಈ ಪೂರ್ವಭಾವಿ ಸಭೆ ನಡೆದಿರುವುದು ಒಗ್ಗಟ್ಟಿನಲ್ಲಿ ಬಲವಿದೆ ಎಂಬುದಕ್ಕೆ ಸಾಕ್ಷಿಯೂ ಕೂಡ.

Leave a Reply

Your email address will not be published. Required fields are marked *

Latest News