ಹುಬ್ಬಳ್ಳಿ: ಒಬ್ಬರು ಉತ್ತಮ ಶಿಕ್ಷಕರು ಅಂದರೆ ಅವರು ಉತ್ತಮ ಶಿಕ್ಷಕರೇ. ಶಿಕ್ಷಕಣ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ ವೈಯಕ್ತಿಕ ನಂಬಿಕೆಯ ಮೇಲೆ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್ ಲೇಫ್ಟಿಸ್ಟ್ ಪರ ಇದೆ. ಭಾರತದ ಸಂಸ್ಕ್ರತಿ ಆಚಾರ ವಿಚಾರ ವಿರೋಧಿಸುವವರ ಪರವೇ ಕಾಂಗ್ರೆಸ್ ಇರುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ ಕಿಡಿ ಕಾರಿದರು.
ಹಿಜಾಬ್ ಪ್ರಕರಣದಲ್ಲಿ ಭಾಗಿಯಾದ ಕಾರಣ ಉಡುಪಿ ಪ್ರಾಂಶುಪಾಲ ರಾಮಕೃಷ್ಣ ಅವರ ಹೆಸರನ್ನು ಸರ್ಕಾರ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿಯಿಂದ ಕೈಬಿಟ್ಟಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇಶದ ಸಂಸ್ಕ್ರತಿ ವಿರೋಧಿಸುವವರಿಗೆ ಈ ಕಾಂಗ್ರೆಸ್ ಪದ್ಮಶ್ರೀಯಂತಹ ಪ್ರಶಸ್ತಿ ನೀಡಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಪ್ರಶಸ್ತಿಗಳಿಗೆ ಗೌರವ ಸಿಗುವ ನಿಟ್ಟಿನಲ್ಲಿ ಕೆಲಸವಾಗುತ್ತಿವೆ. ನಿಸ್ವಾರ್ಥ ಸಮಾಜ ಸೇವಕರನ್ನು ಗುರುತ್ತಿಸಿ ಈಗ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರಶಸ್ತಿಯಿಂದ ಕೈ ಬೀಡುವುದಿ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.